ಗೋ ಬ್ಯಾಕ್ ಶೆಟ್ಟರ್ ಆಯ್ತು…ಈಗ ಸ್ಥಳೀಯ ಬಿಜೆಪಿ ನಾಯಕರಿಂದಲೂ ವಿರೋಧ…!!
ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧೆ ನಡೆಸಲು ಸ್ಥಳೀಯ ನಾಯಕರು ಇಲ್ಲವೇ, ಯಾವುದೇ ಕಾರಣಕ್ಕೂ ಬೇರೆ ಜಿಲ್ಲೆಯವರು ಬಿಜೆಪಿಯಿಂದ ಸ್ಪರ್ಧೆ ನಡೆಸಿದರೆ ಅವರಿಗೆ ಬೆಂಬಲ ನೀಡುವುದಿಲ್ಲ ಎನ್ನುವ ಎಚ್ಚರಿಕೆಯನ್ನು ಪರೋಕ್ಷವಾಗಿ ಜಗದೀಶ್ ಶೆಟ್ಟರ್ ಸ್ಪರ್ಧೆಗೆ ಬೆಳಗಾವಿ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದರೆ ಲಿಂಗಾಯತ ಸಮಾಜವೇ ಅವರನ್ನು ವಿರೋಧ ಮಾಡಿದೆ. ಬೆಳಗಾವಿಗೆ ಜಗದೀಶ್ ಶೆಟ್ಟರ್ ಕೊಡುಗೆ ಏನು ? ಇಲ್ಲಿ ಬರಬೇಕಿದ್ದ ಅದೇಷ್ಟೋ ಯೋಜನೆ ಹುಬ್ಬಳ್ಳಿ- ಧಾರವಾಡಕ್ಕೆ ತೆಗೆದುಕೊಂಡು ಹೋಗಿದ್ದಲ್ಲದೆ, ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ನೇರವಾಗಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿ. ಈಗ ಬಿಜೆಪಿಯಿಂದ ಲೋಕಸಭಾ ಚುನಾವಣೆ ಸ್ಪರ್ಧಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇವರಿಗೆ ಟಿಕೆಟ್ ನೀಡಬಾರದು ಎನ್ನುವ ಸಂದೇಶ ರಾಜ್ಯ ಬಿಜೆಪಿ ನಾಯಕರ ಮೂಲಕ ಹೈಕಮಾಂಡ್ ಗೆ ಜಿಲ್ಲಾ ಬಿಜೆಪಿ ನಾಯಕರು ತಲುಪಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.*********************************






