ಪ್ರಕೃತಿ ಬೆಳಗಾವಿ
*ಕೇಂದ್ರ ಬಜೆಟ್ ರೈತರು, ಯುವಕರು, ಉದ್ಯೋಗ ಸೃಷ್ಟಿಗೆ ಪೂರಕವಾಗಿಲ್ಲ: ಸಚಿವ ಸತೀಶ್ ಜಾರಕಿಹೊಳಿ*

ಪ್ರಕೃತಿ ಬೆಳಗಾವಿ ಸುದ್ದಿ : ಗೋಕಾಕ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ರೈತರು, ಯುವಕರು ಮತ್ತು ಉದ್ಯೋಗ ಸೃಷ್ಟಿಗೆ ಪೂರಕವಾಗಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಟೀಕಿಸಿದ್ದಾರೆ.
2026-27ನೇ ಸಾಲಿನ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಗೆ ಈಗಾಗಲೇ ಘೋಷಿಸಲಾಗಿರುವ 5,300 ಕೋಟಿ ರೂ. ಇನ್ನು ಬಿಡುಗಡೆಯಾಗಿಲ್ಲ, ಈ ಬಾರಿಯೂ ಇದರ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪಿಸಿಲ್ಲ.
ಕರ್ನಾಟಕಕ್ಕೆ ಹಣಕಾಸು ಆಯೋಗ ಶಿಫಾರಸು ಮಾಡಿರುವ 11,495 ಕೋಟಿ ರೂ. ಅನುದಾನ ಬಿಡುಗಡೆಗೆ ಬೇಡಿಕೆ ಇತ್ತು, ಈಗ 16ನೇ ಹಣಕಾಸು ಆಯೋಗದ ಶಿಫಾರಸ್ಸು ಶುರುವಾಗಿದ್ದು ಬಹುತೇಕ ಈ ಹಣ ಬರುವುದು ಅನುಮಾನವಾಗಿದೆ. ಇನ್ನು ರಾಜ್ಯಕ್ಕೆ ಪ್ರಮುಖ ಯೋಜನೆಗಳನ್ನು ಘೋಷಿಸಿಲ್ಲ, ಆದಕಾರಣ ಇದೊಂದು ನಿರಾಶಾದಾಯಕ ಬಜೆಟ್ ಆಗಿದೆ ಎಂದು ಟೀಕಿಸಿದ್ದಾರೆ.********************************






