ಪ್ರಕೃತಿ ಬೆಳಗಾವಿ

*ಬೆಳಗಾವಿಯಲ್ಲಿ ಬಜೆಟ್ ಅಧಿವೇಶನ ನಡೆಸುವಂತೆ ಆಗ್ರಹ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಇಲ್ಲಿನ ಸುವರ್ಣ ವಿಧಾನಸೌಧದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್ ಮಂಡಿಸಬೇಕು ಎಂದು ಸರ್ವಧರ್ಮ ಸಿದ್ದರಾಮಯ್ಯ ಜನಸೇವಾ ಫೌಂಡೇಷನ್ ಅಧ್ಯಕ್ಷ ಪಂಚಾಕ್ಷರಯ್ಯ ಗಣಾಚಾರಿ ಆಗ್ರಹಿಸಿದರು.

ಮಂಗಳವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಮಹಾನಗರವು ಈಗಾಗಲೇ ರಾಜ್ಯದ ಎರಡನೇ ರಾಜಧಾನಿಯಾಗಿ ಗುರುತಿಸಿಕೊಂಡಿದೆ.

ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಬಜೆಟ್ ಅಧಿವೇಶನವನ್ನು ಬೆಂಗಳೂರಿನ ಬದಲು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲೇ ನಡೆಸಬೇಕು. ಅಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸುವ ಮೂಲಕ ಇತಿಹಾಸ ಸೃಷ್ಟಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪ್ರಕಾಶ ಮುಧೋಳ ಹಾಗೂ ಈರಣ್ಣಗೌಡ ಪಾಟೀಲ ಉಪಸ್ಥಿತರಿದ್ದರು*****************************

Back to top button