ಪ್ರಕೃತಿ ಬೆಳಗಾವಿ
*ಮುಂದಿನ ದಿನಗಳಲ್ಲಿ ಒಲಿಂಪಿಕ್ಸ್ ಮಾದರಿಯಲ್ಲಿ ಕ್ರೀಡಾಕೂಟ ಆಯೋಜನೆ: ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಹುಲ್ ಜಾರಕಿಹೊಳಿ*

ಪ್ರಕೃತಿ ಬೆಳಗಾವಿ ಸುದ್ದಿ : ಗೋಕಾಕ : ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಆಯೋಜಿಸಲಾದ ಸತೀಶ್ ಶುಗರ್ಸ್ ಅವಾರ್ಡ್ಸ್ ಔತಣಕೂಟ ಸಮಾರಂಭದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ತಿಳಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಸತೀಶ್ ಶುಗರ್ಸ್ ಅವಾರ್ಡ್ಸ್ ಕಾರ್ಯಕ್ರಮದಿಂದ ವಿದ್ಯಾರ್ಥಿಗಳ ಪ್ರತಿಭೆ ಗುರುತಿಸುವ ಕಾರ್ಯ ಆಗುತ್ತದೆ, ಮುಂದಿನ ದಿನಗಳಲ್ಲಿ ಒಲಿಂಪಿಕ್ಸ್ ಮಾದರಿಯಲ್ಲಿ ಕ್ರೀಡಾಕೂಟ ಆಯೋಜನೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಸತೀಶ್ ಶುಗರ್ಸ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.******************************






