ಪ್ರಕೃತಿ ಬೆಳಗಾವಿ
*ಮಚ್ಚೆದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಜನರಲ್ಲಿ ಸಚಿವರ ಸತೀಶ ಜಾರಕಿಹೊಳಿ ಮನವಿ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಮಚ್ಚೆ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಸಿ ಬಳಿದಿರುವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಬೆಳಗಾವಿ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ತಿಳಿಸಿದ ಅವರು, ಮಚ್ಚೆ ಗ್ರಾಮದಲ್ಲಿರುವ ನಡೆದಿರುವ ಈ ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸ್ ರು ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆ ಸಂಬಂಧ ತನಿಖೆ ಮುಂದುವರೆದಿದೆ. ಗ್ರಾಮದ ಜನರು ಯಾವುದೇ ರೀತಿ ಆತಂಕಕ್ಕೆ ಒಳಗಾಗಬಾರದು, ಅಲ್ಲದೇ ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಸಚಿವರು ಗ್ರಾಮಸ್ಥರಲ್ಲಿ ಮನವಿ ಮಾಡಿಕೊಂಡಿದ್ದಾರೆ.****************************






