*ಲಕ್ಷ್ಮೇಶ್ವರ ನೌಕರರು ಬೆಂಗಳೂರಿನಲ್ಲಿ ನಡೆದ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗಿ*

ಪ್ರಕೃತಿ ಬೆಳಗಾವಿ ಸುದ್ದಿ : ಲಕ್ಷ್ಮೇಶ್ವರ ತಾಲೂಕಿನ ಶಾಲಾ ಶಿಕ್ಷಕರ ಸಂಘ ಹಾಗೂ ನೌಕರರ ಸಂಘದ ಪದಾಧಿಕಾರಿಗಳು ನಿನ್ನೆ ನಡೆದ ರಾಜ್ಯಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ ಹಾಗೂ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಾರ್ಯಕ್ರಮಕ್ಕೆ ಸಾಕ್ಷಿಕರಿಸಲಾಯಿತು.
ಇದೇ ಸಂದರ್ಭದಲ್ಲಿ ಹಳೆ ಪಿಂಚಣಿ ವ್ಯವಸ್ಥೆ ಮರುಜರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶನಿವಾರ ಆಯೋಜಿಸಿದ ರಾಜ್ಯಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ ಹಾಗೂ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರ ಹಲವು ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ ನಾನು ಹಿಂದೆ ಹಣಕಾಸು ಸಚಿವನಾಗಿದ್ದಾಗ ಐದು ವರ್ಷಗಳಲ್ಲಿ ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಿದ್ದೆ 6 ಮತ್ತು 7ನೇ ವೇತನ ಆಯೋಗ ಜಾರಿ ಮಾಡಿದ್ದೇನೆ ಎಂದು ಭರವಸೆ ನೀಡಿದರು. ಶೇಕಡ 12 ರಿಂದ 15 ರಷ್ಟಿದ್ದ ಸಾಕ್ಷರತಾ ಪ್ರಮಾಣ ಪ್ರಸ್ತುತ 74 ರಷ್ಟಿದೆ.
ಮಕ್ಕಳಿಗೆ ಉತ್ತಮ ಬೋಧನೆ ನೀಡುವ ಜೊತೆಗೆ ಶಿಕ್ಷಕರ ನಡವಳಿಕೆಯು ಉತ್ತಮವಾಗಿರಬೇಕು ಎಂಬ ಮುಂತಾದ ವಿಷಯಗಳನ್ನು ಸಿಎಂ ಸಿದ್ದರಾಮಯ್ಯ ಬೋಧಿಸಿದರು. ಶಿಕ್ಷಣ ಅಭಿಮಾನಿಗಳು ಭಾಗವಹಿಸಿದ್ದರು ಲಕ್ಷ್ಮೇಶ್ವರ ತಾಲೂಕ ಘಟಕದಿಂದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಬಸವರಾಜ ಹರ್ಲಾಪುರ ಕಾರ್ಯದರ್ಶಿ ಚಂದ್ರಕಾಂತ ನೇಕಾರ, ನೌಕರರ ಸಂಘದ ಅಧ್ಯಕ್ಷ ಗುರುರಾಜ ಹವಳದ, ಪ್ರಧಾನ ಕಾರ್ಯದರ್ಶಿ ಎಮ್ ಎ ನದಾಫ, ನಿಕಟ ಪೂರ್ವ ಅಧ್ಯಕ್ಷ ಡಿ ಎಚ್ ಪಾಟೀಲ, ಖಜಾಂಚಿ ಬಿ ಬಿ ಯತ್ತಿನಹಳ್ಳಿ,ಜಿ ಎಸ್ ಗುಡಗೇರಿ, ಎಮ್ ಎಸ್ ಹಿರೇಮಠ, ನಿರ್ದೇಶಕರಾದ ಬಿ ಎಮ್ ಯರಗುಪ್ಪಿ,ಡಿ ಡಿ ಲಮಾಣಿ, ಎಮ್ ಎನ್ ಭರಮಗೌಡರ, ಶಿವಾನಂದ ಅಸುಂಡಿ, ಫಕ್ಕೀರೇಶ ಡಂಬಳ, ಮುತ್ತು ಹುಬ್ಬಳ್ಳಿ, ವಿನೋದ ಓದುನವರ, ಉಪಸ್ಥಿತರಿದ್ದರು.******************************






