ಪ್ರಕೃತಿ ಬೆಳಗಾವಿ

*ಸಚಿವ ಸತೀಶ್ ಜಾರಕಿಹೊಳಿ ಸಮ್ಮುಖದಲ್ಲಿ ಡಾ. ಅಂಬೇಡ್ಕರ್ ಜೀವನ ಸಂದೇಶ ಸಾರುವ ಪುಸ್ತಕ ಬಿಡುಗಡೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ 135ನೇ ಜಯಂತಿಯ ಅಂಗವಾಗಿ ಹಮ್ಮಿಕೊಳ್ಳಲಿರುವ ವಿವಿಧ ಕಾರ್ಯಕ್ರಮಗಳ ಕುರಿತು ಚರ್ಚಿಸಲು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಕಚೇರಿಯಲ್ಲಿ ವಿಶೇಷ ಸಭೆ ನಡೆಯಿತು. ಇದೇ ಸಂದರ್ಭದಲ್ಲಿ ಲೇಖಕಿ ಜೀವನಲತಾ ಲ. ನಡವಿನಮನಿ ಅವರು ರಚಿಸಿರುವ ಡಾ. ಅಂಬೇಡ್ಕರ್ ಅವರ ಜೀವನ ಸಂದೇಶ ಸಾರುವ ಮಹತ್ವದ ಪುಸ್ತಕವನ್ನು ಸಚಿವರಿಗೆ ಸನ್ಮಾನಿಸುವ ಮೂಲಕ ಬಿಡುಗಡೆ ಮಾಡಲಾಯಿತು.

ಅಂಬೇಡ್ಕರ್ ಅವರ ತತ್ತ್ವಚಿಂತನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಈ ಕಾರ್ಯಕ್ಕೆ ಸಚಿವರು ಈ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.

​ಈ ಕಾರ್ಯಕ್ರಮದ ಮತ್ತೊಂದು ವಿಶೇಷವೆಂದರೆ, ಸಮಾಜ ಸೇವಕ ಆಕಾಶ ರುದ್ರಪ್ಪಾ ಹಲಗೇಕರ ಅವರು ಡಾ. ಅಂಬೇಡ್ಕರ್ ಅವರ ಸಂದೇಶಗಳನ್ನು ಪ್ರಸಾರ ಮಾಡುವ ಉದ್ದೇಶದಿಂದ 5000 ಪುಸ್ತಕಗಳನ್ನು ಉಚಿತವಾಗಿ ವಿತರಿಸುತ್ತಿದ್ದು, ಅವರ ಹಸ್ತದಿಂದಲೇ ಪುಸ್ತಕದ ಬಿಡುಗಡೆ ಕಾರ್ಯ ನೆರವೇರಿತು. ಈ ಸಮಾರಂಭದಲ್ಲಿ ಮಹಾಮಂಡಳದ ಅಧ್ಯಕ್ಷರಾದ ಮಲ್ಲೇಶ್ ಚೌಗುಲೆ ಹಾಗೂ ದಲಿತ ಸಮಾಜದ ಪ್ರಮುಖ ಮುಖಂಡರು ಉಪಸ್ಥಿತರಿದ್ದು, ಮುಂಬರುವ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಕುರಿತು ಸಮಾಲೋಚನೆ ನಡೆಸಿದರು.

ಇದೇ ವೇಳೆ ಜೀವನಲತಾ ನಡವಿನಮನಿ ಅವರನ್ನು ಸನ್ಮಾನಿಸಲಾಯಿತು.****************************

Back to top button