ಪ್ರಕೃತಿ ಬೆಳಗಾವಿ

*ಕಾಮಧೇನು ಸಂಜೀವಿನಿ ಮಹಿಳಾ ಸ್ವ-ಸಹಾಯ ಸಂಘಕ್ಕೆ ರಾಜ್ಯಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ*

ಪ್ರಕೃತಿ ಬೆಳಗಾವಿ ಸುದ್ದಿ : ಹುಬ್ಬಳ್ಳಿ  ಮಾ.25 : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2026 ರ ಅಂಗವಾಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರತಿ ವರ್ಷ ನೀಡಲಾಗುವ ಪ್ರತಿಷ್ಠಿತ 2025–26ನೇ ಸಾಲಿನ ರಾಜ್ಯಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ಮಹಿಳೆಯರ ಸಾಮಾಜಿಕ ಅಭಿವೃದ್ಧಿಯಲ್ಲಿ ಗಣನೀಯ ಸೇವೆ ಸಲ್ಲಿಸಿರುವ

ಧಾರವಾಡ ಜಿಲ್ಲೆಯ ಕಬ್ಬೆನೂರು ಗ್ರಾಮದ ಕಾಮಧೇನು ಸಂಜೀವಿನಿ ಮಹಿಳಾ ಸ್ವ-ಸಹಾಯ ಸಂಘಕ್ಕೆ ಪ್ರದಾನ ಮಾಡಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ನಿನ್ನೆ (ಮಾ.24) ಸಂಜೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜರುಗಿದ ಸಮಾರಂಭದಲ್ಲಿ ಸಂಘದ ಪ್ರತಿನಿಧಿಯನ್ನು ಸನ್ಮಾನಿಸಿ ಗೌರವಿಸಿ, ಪ್ರಶಸ್ತಿ ಪ್ರಧಾನ ಮಾಡಿದರು.

ಪ್ರಶಸ್ತಿಯನ್ನು ಕಾಮಧೇನು ಸಂಜೀವಿನಿ ಮಹಿಳಾ ಸ್ವ-ಸಹಾಯ ಸಂಘ ಪ್ರತಿನಿಧಿ-1 ಆಗಿರುವ ರಾಜೇಶ್ವರಿ ಮಂಜುನಾಥ ಪವಾಡಿ ಅವರು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಮಹಿಳಾ ಸ್ವ ಸಹಾಯ ಸಂಘದ ಪ್ರತಿನಿಧಿಗಳು, ಸದಸ್ಯರು ಇದ್ದರು.************************************

Back to top button