ಪ್ರಕೃತಿ ಬೆಳಗಾವಿ
*ಅಸ್ವಸ್ಥಗೊಂಡ ಮಹಿಳೆಗೆ ನೆರವಾದ ಅಕ್ಕ ಪಡೆ: ಮಾನವೀಯತೆ ಮೆರೆದ ಮಹಿಳಾ ಪೊಲೀಸ್ ಸಿಬ್ಬಂದಿ*

ಪ್ರಕೃತಿ ಬೆಳಗಾವಿ ಸುದ್ದಿ : ಮೈಸೂರು : ನಗರದಲ್ಲಿ ಅಸ್ವಸ್ಥಗೊಂಡು ರಸ್ತೆಯ ಬದಿಯಲ್ಲಿ ಬಿದ್ದಿದ್ದ ಮಹಿಳೆಗೆ ಅಕ್ಕ ಪಡೆ ಮಹಿಳಾ ಪೊಲೀಸರು ತಕ್ಷಣ ಸ್ಪಂದಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ.
ಮೈಸೂರಿನ ಕೆಎಚ್‌ಬಿ ಕಾಲೋನಿಯ ಎಂಎಂಜಿ ಲೇಔಟ್ ಸಮೀಪ ಶೋಭಾ ಎಂಬ ಮಹಿಳೆ ಅಸ್ವಸ್ಥಗೊಂಡು ಬಿದ್ದಿರುವುದನ್ನು ಗಮನಿಸಿದ ಅಕ್ಕ ಪಡೆಯ ಮಹಿಳಾ ಅಧಿಕಾರಿಗಳು ಹಾಗೂ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಅವರನ್ನು ರಕ್ಷಿಸಿದರು. ಬಳಿಕ ಆಕೆಯ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ, ಯಾವುದೇ ಅಪಾಯವಾಗದಂತೆ ಸುರಕ್ಷಿತವಾಗಿ ಹಿನಕಲ್‌ನಲ್ಲಿರುವ ಅವರ ನಿವಾಸಕ್ಕೆ ಕರೆದೊಯ್ದರು.
ಅಲ್ಲಿ ಮಹಿಳೆಯ ಮಗ ಕುಶಾಲ್ ಅವರ ಸುಪರ್ದಿಗೆ ಒಪ್ಪಿಸುವ ಮೂಲಕ ಪೊಲೀಸ್ ಸಿಬ್ಬಂದಿ ತಮ್ಮ ಕರ್ತವ್ಯ ನಿಷ್ಠೆಯನ್ನು ತೋರಿದ್ದಾರೆ. ಈ ಕಾರ್ಯಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಪೊಲೀಸ್ ಇಲಾಖೆಯ ಮಾನವೀಯ ಮುಖ ಮತ್ತೊಮ್ಮೆ ಹೊರಹೊಮ್ಮಿದೆ.*******************************






