ಪ್ರಕೃತಿ ಬೆಳಗಾವಿ
*ಜೈನ್ ಹೆರಿಟೇಜ್ ಶಾಲೆ ಸಾಧನೆ: ಸಿಬಿಎಸ್ಇ 10ನೇ ತರಗತಿಯಲ್ಲಿ ಶೇ.100 ಫಲಿತಾಂಶ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಜೈನ್ ಹೆರಿಟೇಜ್ ಶಾಲೆಯು 2025–26ನೇ ಸಾಲಿನ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಗಮನಾರ್ಹ ಸಾಧನೆ ಮಾಡಿದೆ.
ಶಾಲೆಯ ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಸಮರ್ಪಣೆ ಹಾಗೂ ಪೋಷಕರ ಬೆಂಬಲದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ. ಶಿಕ್ಷಣದ ಗುಣಮಟ್ಟದಲ್ಲಿ ಸದಾ ಮೆಟ್ಟಿಲೇರಲು ಪ್ರಯತ್ನಿಸುವ ಜೆಎಚ್ಎಸ್, ಮತ್ತೊಮ್ಮೆ ತನ್ನ ಸಾಮರ್ಥ್ಯವನ್ನು ತೋರಿಸಿದೆ.
ಈ ಸಾಧನೆಗೆ ಶಾಲಾ ಆಡಳಿತವು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರಿಗೆ ಅಭಿನಂದನೆ ಸಲ್ಲಿಸಿದ್ದು, ಮುಂದಿನ ದಿನಗಳಲ್ಲೂ ಇದೇ ರೀತಿ ಉತ್ತಮ ಫಲಿತಾಂಶ ನೀಡುವ ವಿಶ್ವಾಸ ವ್ಯಕ್ತಪಡಿಸಿದೆ.********************************






