ಪ್ರಕೃತಿ ಬೆಳಗಾವಿ

*ಮುರಗೋಡ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್*

ಪ್ರಕೃತಿ ಬೆಳಗಾವಿ ಸುದ್ದಿ : ಬೈಲಹೊಂಗಲ : ಮುರಗೋಡ ಗ್ರಾಮದ ಪುಣ್ಯಕ್ಷೇತ್ರ ಶ್ರೀ ಮಹಾಂತ ದುರದುಂಡೇಶ್ವರ ಮಠಕ್ಕೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶ್ರೀ ಮಹಾಂತ ಶಿವಯೋಗಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು.

ಬಳಿಕ ಮಠದ ಪೀಠಾಧ್ಯಕ್ಷರಾದ ಶ್ರೀ ಮ.ನಿ.ಪ್ರ.ಸ್ವ ನೀಲಕಂಠ ಮಹಾಸ್ವಾಮಿಗಳ ಹುಟ್ಟುಹಬ್ಬದ ಪ್ರಯುಕ್ತ ಶುಭಾಶಯ ಕೋರಿ ಅವರ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆದರು.

ಈ ವೇಳೆ ಅಥಣಿ ಮೋಟಗಿ ಮಠದ ಪ್ರಭು ಚನ್ನಬಸವ ಶ್ರೀಗಳು, ಶಾಸಕ ಮಹಾಂತೇಶ ಕೌಜಲಗಿ, ಜಿಲ್ಲಾ ಕಾಂಗ್ರೆಸ್‌ ಮುಖಂಡರಾದ ಮಹಾಂತೇಶ್ ಮತ್ತಿಕೊಪ್ಪ, ಮಠದ ಪದಾಧಿಕಾರಿಗಳು, ಭಕ್ತಾಧಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.*****************************

Back to top button