*ಬೆಳಗಾವಿ: ಸಿಸಿಬಿ ಪೊಲೀಸರಿಂದ ಗಾಂಜಾ ಮಾರಾಟ ಜಾಲದ ಮೇಲೆ ದಾಳಿ – ಒಬ್ಬನ ಬಂಧನ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ ನಗರದಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ಸಿಸಿಬಿ ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ.
ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ತಂಡ ಯಶಸ್ವಿಯಾಗಿ ಬಂಧಿಸಿದೆ.
ದಿನಾಂಕ 10.05.2026 ರಂದು ಬೆಳಗಾವಿಯ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯ NH-48 ರ ಸರ್ವಿಸ್ ರಸ್ತೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರು ಈ ದಾಳಿ ನಡೆಸಿದ್ದಾರೆ.
ಸೈಯ್ಯದ್ ನಿಸಾರ್ ತಂದೆ ಸೈಯ್ಯದ್ ಇಸಾಕ್ (40), ನಿವಾಸಿ: ಅರುಣಾದ ನಗರ, ವಾರಳಿ, ಮಹಾರಾಷ್ಟ್ರ.
ಸುಮಾರು 6 ಕೆಜಿ 145 ಗ್ರಾಂ ಗಾಂಜಾ(ಮೌಲ್ಯ ₹3,05,000/-)
ಒಂದು ವಿವೋ ಕಂಪನಿಯ ಮೊಬೈಲ್ ಫೋನ್.
ಒಟ್ಟು ಸುಮಾರು ₹3,10,000/- ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಸಿಸಿಬಿ ಘಟಕದ ಇನ್ಸ್‌ಪೆಕ್ಟರ್ ಮಂಜುನಾಥ ನಾಯಕ, ಮಂಜುನಾಥ ಭಜಂತ್ರಿ ಹಾಗೂ ಸಿಬ್ಬಂದಿಯವರು ಈ ಯಶಸ್ವಿ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿ ಅವರು ಶ್ಲಾಘಿಸಿದ್ದಾರೆ. ಇದು ಗುಬ್ಬಿ ಮಾತು.
ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.*****************************











