ಪ್ರಕೃತಿ ಬೆಳಗಾವಿ

*ನಾಳೆ ಬೆಳಿಗ್ಗೆ 11 ಗಂಟೆಗೆ ಮುಹೂರ್ತ ಫಿಕ್ಸ್ ಆಗಿದೆ; ಎಲ್ಲಾ ಗೊಂದಲ ಎಂಡ್ ಆಗುತ್ತೆ ಎಂದ ಸತೀಶ್ ಜಾರಕಿಹೊಳಿ*

ಪ್ರಕೃತಿ ಬೆಳಗಾವಿ ಸುದ್ದಿ : ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ಕುರ್ಚಿ ಕಾಳಗದ ನಡುವೆ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಅವರಿಗೆ ಬುಲಾವ್ ನೀಡಿದ್ದಾರೆ.

ನಾಳೆ ಬೆಳಿಗ್ಗೆ 11 ಗಂಟೆಗೆ ಮುಹೂರ್ತ ಫಿಕ್ಸ್ ಆಗಿದೆ ಎಲ್ಲಾ ಗೊಂದಲಗಳಿಗೆ ತೆರೆ ಬೀಳಲಿದೆ. ಮುಹೂರ್ತ ಅಷ್ಟೇ ಫಿಕ್ಸ್ ಆಗಿದೆ. ಆದರೆ ಅವರ ಅಜೆಂಡಾ ಏನು ಎಂಬುದು ಗೊತ್ತಿಲ್ಲ. ಅಲ್ಲಿ ಏನು ಚರ್ಚೆ ಆಗುತ್ತದೆ ಎಂಬುದರ ಬಗ್ಗೆಯೂ ಮಾಹಿತಿ ಇಲ್ಲ. ನಾಳೆ ಏನಾಗಲಿದೆ ಎಂಬುದನ್ನು ಕಾದುನೋಡಬೇಕು ಎಂದು ಹೇಳಿದರು.

ನಾವು ಕಾಂಗ್ರೆಸ್ ನಲ್ಲಿನ ಗೊಂದಲಗಳಿಗೆ ತೆರೆ ಎಳೆಯುವಂತೆ ಹೇಳುತ್ತಿದ್ದೆವು. ಹಾಗಾಗಿ ನಾಳೆ ಬೆಳಿಗ್ಗೆ ಹೈಕಮಾಂಡ್ ನಾಯಕರು ಮುಹೂರ್ತ್ ಫಿಕ್ಸ್ ಮಾಡಿದ್ದಾರೆ. ಚರ್ಚೆ ಮಾಡಲಿದ್ದಾರೆ. ನಾಳೆ ಎಲ್ಲಾ ಗೊಂದಗಳಿಗೆ, ನಾಯಕರ ಅನಾವಶ್ಯಕ ಹೇಳಿಕೆಗಳಿಗೆ ಬ್ರೇಕ್ ಬೀಳಲಿದೆ ಎಂಬ ನಿರೀಕ್ಷೆ ಇದೆ ಎಂದರು.**********************************

Back to top button