*2026-27ನೇ ಸಾಲಿನ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಇಲ್ಲಿನ ಸುವರ್ಣ ವಿಧಾನಸೌಧದ ಕಾನ್ಫರೆನ್ಸ್ ಹಾಲ್ ನಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಶ್ರೀ ಜಗದೀಶ ಶೆಟ್ಟರ್ ರವರ ಅಧ್ಯಕ್ಷತೆಯಲ್ಲಿ ಇಂದು 2026-27ನೇ ಸಾಲಿನ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆ ಜರುಗಿತು.
ಸಭೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಶ್ರೀ ಜಗದೀಶ ಶೆಟ್ಟರ್, ಮಾನ್ಯ ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ, ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಮಾನ್ಯ ಸಂಸದರಾದ ಕು. ಪ್ರಿಯಾಂಕಾ ಜಾರಕಿಹೊಳಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದು, ಕೇಂದ್ರ ಸರ್ಕಾರದ ಪ್ರಾಯೋಜಿತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ವಿವಿಧ ಸೂಚನೆ, ನಿರ್ದೇಶನಗಳನ್ನು ನೀಡಿದರು.
ಮಾನ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ಶಿಂಧೆ ಅವರು ಸಭೆಯಲ್ಲಿ ಭಾಗವಹಿಸಿ ವಿವಿಧ ಯೋಜನೆಗಳ ಕುರಿತು ಅಧಿಕಾರಿಗಳಿಗೆ ಸಲಹೆ, ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು, ಜಿಲ್ಲಾ ಪಂಚಾಯತ ಅಧಿಕಾರಿಗಳು ಸೇರಿ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.*********************************






