ಪ್ರಕೃತಿ ಬೆಳಗಾವಿ

*ಆಸೀಫ್ (ರಾಜೂ) ಸೇಠ್ ಅವರಿಗೆ ಮಂತ್ರಿಗಿರಿ ನೀಡಿ: ಕಿತ್ತೂರು ಕರ್ನಾಟಕ ಅಲ್ಪಸಂಖ್ಯಾತ ಮುಖಂಡರ ಆಗ್ರಹ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಆಸೀಫ್ (ರಾಜೂ) ಸೇಠ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕಿತ್ತೂರು ಕರ್ನಾಟಕ ಭಾಗದ ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಆಗ್ರಹಿಸಿದ್ದಾರೆ.

ಆಸೀಫ್ (ರಾಜೂ) ಸೇಠ್ ಅವರು ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆ ಬಲಪಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಅಲ್ಪಸಂಖ್ಯಾತ ಸಮುದಾಯದ ಧ್ವನಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಹಾಗೂ ಹಿರಿಯ ನಾಯಕರಾಗಿ ಗುರುತಿಸಿಕೊಂಡಿರುವ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಕಿತ್ತೂರು ಕರ್ನಾಟಕ ಭಾಗಕ್ಕೆ ಸೂಕ್ತ ಪ್ರತಿನಿಧಿತ್ವ ದೊರೆಯಲಿದೆ ಎಂದು ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಗೆ ಅವರ ಕೊಡುಗೆ ಮಹತ್ವದ್ದಾಗಿದ್ದು, ಆಡಳಿತದಲ್ಲಿ ಅನುಭವ ಹೊಂದಿರುವ ಆಸೀಫ್ ಸೇಠ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಅಲ್ಪಸಂಖ್ಯಾತ ಸಮುದಾಯದ ಆಶೋತ್ತರಗಳಿಗೆ ಸ್ಪಂದಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯದ ವಿವಿಧ ಭಾಗಗಳಿಗೆ ಸಮಾನ ಪ್ರಾತಿನಿಧ್ಯ ನೀಡುವ ನಿಟ್ಟಿನಲ್ಲಿ ನಡೆಯಲಿರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಆಸೀಫ್ (ರಾಜೂ) ಸೇಠ್ ಅವರಿಗೆ ಅವಕಾಶ ಕಲ್ಪಿಸಬೇಕು ಎಂದು ಅಲ್ಪಸಂಖ್ಯಾತ ಸಮುದಾಯದ ಮುಖಂಡರು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.*********************************

Back to top button