ಪ್ರಕೃತಿ ಬೆಳಗಾವಿ

*ಜಿಲ್ಲೆಯ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಯಶಸ್ವಿಗೆ ರಾಜಕೀಯ ಪಕ್ಷ, ಸಾರ್ವಜನಿಕರ ಸಹಕಾರ ಅಗತ್ಯ: ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ, ಜೂ.08 : ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಶೀಲನೆ ಪ್ರಕ್ರಿಯೆ ಎಲ‌್ಲ ರಾಜ್ಯಗಳಲ್ಲಿ ಪ್ರಾರಂಭವಾಗಿದ್ದು, ಜಿಲ್ಲೆಯಾದ್ಯಂತ ಜೂನ್ 30 ರಿಂದ ಅಕ್ಟೋಬರ್ 7 ರವರೆಗೆ ಜರುಗಲಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಯಶಸ್ವಿಯಾಗಲು ರಾಜಕೀಯ ಪಕ್ಷಗಳು, ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಹೇಳಿದರು.

ಸುವರ್ಣ ವಿಧಾನಸೌಧ ಕಾನ್ಫರೆನ್ಸ್ ಸಭಾಂಗಣದಲ್ಲಿ ಸೋಮವಾರ (ಜೂ.8) ಜರುಗಿದ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಮಾಧ್ಯಮ ಪ್ರತಿನಿಧಿಗಳೊಂದಗಿನ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಶೀಲನೆ ಪ್ರಕ್ರಿಯೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. 2002ರಲ್ಲಿ ಜರುಗಿದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಶೀಲನೆಯ ಮತದಾರರ ಪಟ್ಟಿಯನ್ನು ಮೂಲವಾಗಿಟ್ಟುಕೊಂಡು ಅದರಲ್ಲಿನ ಬದಲಾವಣೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ ಎಂದರು.

ಜಿಲ್ಲೆಯ 18 ವಿಧಾನ ಸಭಾ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡಲಾಗಿದ್ದು, 41,22,869 ಮತದಾರರ ಪೈಕಿ 38,22,990 ಮತದಾರರ ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿದ್ದು ಮ್ಯಾಪಿಂಗ್ ಕಾರ್ಯದಲ್ಲಿ ಜಿಲ್ಲೆಯಲ್ಲಿ ಪ್ರತಿಶತ 93 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.

ಚುನಾವಣೆಗಳಿಗೆ ಮತದಾರರ ಪಟ್ಟಿಯ ಸಮಗ್ರತೆಯನ್ನು ಕಾಪಾಡುವುದು ಮೂಲಭೂತ ಅವಶ್ಯಕತೆಯಾಗಿದೆ. ವೆೇಗದ ನಗರೀಕರಣ, ಶಿಕ್ಷಣ ಮತ್ತು ಜೇವನೋಪಾಯಕ್ಕಾಗಿ ವಲಸೆ ಹೋಗುವುದು, ರಾಜಕೇಯ ಪಕ್ಷಗಳು ಮತದಾರರ ಪಟ್ಟಿಯ ಗುಣಮಟ್ಟದ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿರುವುದು ಹಾಗೂ ಮೃತಪಟ್ಟವರು, ಸ್ಥಳಾಂತರಗೊಂಡ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕುವುದು ಮತದಾರರ ಪಟ್ಟಿ ವೀಶೇಷ ಸಮಗ್ರ ಪರಿಶೀಲನೆಯ ಉದ್ದೇಶವಾಗಿದೆ ಎಂದರು.

ಭೂತ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಎನ್ಯೂಮರೇಶನ್ ಅರ್ಜಿಗಳನ್ನು ನೀಡಿ ಅವುಗಳನ್ನು ಸಂಗ್ರಹಿಸಲು ಕನಿಷ್ಠ ಮೂರು ಭಾರಿ ಭೇಟಿ ನೀಡುವರು. ಮತದಾರರು ತಮ್ಮ ವಿವರಗಳನ್ನು ಹಿಂದಿನ SIR ಮತದಾರರ ಪಟ್ಟಿಯ ಆಧಾರದ ಮೇಲೆ ಭರ್ತಿ ಮಾಡಿ ಅರ್ಜಿ ಜೊತೆಗೆ ಕೇಳಲಾದಂತಹ ಯಾವುದಾದರೊಂದು ದಾಖಲೆಗಳನ್ನು ಲಗತ್ತಿಸಿ ಬಿ.ಎಲ್.ಓ‌ ಗಳಿಗೆ ನೀಡಬೇಕು.‌ ತದನಂತರ ಬಿ.ಎಲ್.ಓ ಗಳು ಅವುಗಳನ್ನು ಪರಿಶೀಲಿಸಿ ತಂತ್ರಾಂಶದಲ್ಲಿ ದಾಖಲಿಸಿರುತ್ತಾರೆ. ಅಗತ್ಯ ದಾಖಲೆಗಳಿಲ್ಲದೆ ಮತದಾರರ ಪಟ್ಟಿಯಲ್ಲಿನ ಹೆಸರುಗಳನ್ನು ತೆಗೆದು ಹಾಕಲು ಅವಕಾಶ ವಿರುವುದಿಲ್ಲ. ಮತದಾರರ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆ ಹೊಂದಲು ನಮೂನೆ 6 ನ್ನು ಸಲ್ಲಿಸಬೇಕು ಎಂದರು.

ದೇಶದ ಮೂಲ‌ ನಿವಾಸಿಗಳು ಮತದಾನದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದೊಂದಿಗೆ ಭಾರತ ಚುನಾವಣಾ ಆಯೋಗವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ಯಶಸ್ವಿಗಾಗಿ ವಿವಿಧ ರಾಜಕೀಯ ಪಕ್ಷಗಲಕು ಹಾಗೂ ಸಾರ್ವಜನಿಕರ ಸಹಕಾರ ಅತಗತ್ಯವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರು ಹೇಳಿದರು.

ಕಾರ್ಯಕ್ರಮದ‌ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಮಹಾನಗರ ಪಾಲಿಕೆ ಉಪ ಆಯುಕ್ತರಾದ ಸಿದ್ದು ಹುಲ್ಲೋಳಿ ಅವರು ಮಾತನಾಡಿ ಜೂನ್ 20 ರಿಂದ ಜೂನ್ 29 ರವರೆಗೆ ಮತದಾರರ ಪಟ್ಟಿ ತಯಾರಿ, ತರಬೇತಿ ಮತ್ತು ಮುದ್ರಣ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಬಿಎಲ್‍ಓಗಳು ಜೂನ್ 30 ರಿಂದ ಜುಲೈ 29 ರವರೆಗೆ ಮನೆ ಮನೆಗೆ ಭೇಟಿ ನೀಡುವರು. ಕರಡು ಮತದಾರರ ಪಟ್ಟಿಯನ್ನು ಆಗಸ್ಟ 5 ರಂದು ಪ್ರಕಟಿಸಲಾಗುವುದು. ಆಕ್ಷೇಪಣೆಗಳನ್ನು ಸಲ್ಲಿಸಲು ಆಗಸ್ಟ 5 ರಿಂದ ಸೆಪ್ಟೆಂಬರ್ 4 ರವರೆಗೆ ಕಾಲಾವಕಾಶ ನೀಡಲಾಗಿದೆ. ಆಕ್ಷೇಪಣೆಗಳ ವಿಲೇವಾರಿಯನ್ನು ಆಗಸ್ಟ 5 ರಿಂದ ಅಕ್ಟೋಬರ್ 3 ರವರೆಗೆ ಕೈಗೊಳ್ಳಲಾಗುತ್ತದೆ. ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 7 ರಂದು ಪ್ರಕಟಣೆ ಮಾಡಲಾಗುವುದು ಎಂದು ತಿಳಿಸುವುದರ ಮೂಲಕ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಶೀಲನೆಯ ವಿವಿಧ ಹಂತಗಳನ್ನು‌ ಪ್ರಾತ್ಯಕ್ಷಿಕೆ ಮೂಲಕ ಸವಿವರವಾಗಿ ವಿವರಿಸಿದರು.

ತದನಂತರ ವಿವಿಧ ರಾಜಕೀಯ ಮುಖಂಡರುಗಳು ಹಾಗೂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಜರುಗಿದ ಸಂವಾದದಲ್ಲಿ ಜಿಲ್ಲಾಧಿಕಾರಿಗಳಾದ‌ ಮೊಹಮ್ಮದ್ ರೋಷನ್ ಅವರು ಸವಿವರವಾದ ಮಾಹಿತಿಯನ್ನು ನೀಡಿದರು.

ಕಾರ್ಯಾಗಾರದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಪ್ರಶಿಕ್ಷಣಾರ್ಥಿ ಆಯ್.ಎ.ಎಸ್. ಅಧಿಕಾರಿ ರೋಹಿತ ಸಿಂಗ್, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಜರಿದ್ದರು.*********************************

Leave a Reply

Your email address will not be published. Required fields are marked *

Back to top button