ಪ್ರಕೃತಿ ಬೆಳಗಾವಿ

*2025-26ನೇ ಸಾಲಿನ ನಾಲ್ಕನೇ ತ್ರೈಮಾಸಿಕ ಡಿಸಿಸಿ –ಡಿ.ಎಲ್.ಆರ್.ಸಿ. ಪ್ರಗತಿ ಪರಿಶೀಲನಾ ಸಭೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಬೆಳಗಾವಿ ಲೋಕಸಭಾ ಮತಕ್ಷೇತ್ರದ ಮಾನ್ಯ ಸಂಸದರಾದ ಶ್ರೀ ಜಗದೀಶ ಶೆಟ್ಟರ್ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು 2025-26ನೇ ಸಾಲಿನ ನಾಲ್ಕನೇ ತ್ರೈಮಾಸಿಕ ಡಿಸಿಸಿ –ಡಿ.ಎಲ್.ಆರ್.ಸಿ. ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಮಾನ್ಯರು ಸಭೆಯಲ್ಲಿ ಭಾಗವಹಿಸಿ 2025-26ನೇ ಸಾಲಿನ 4ನೇ ತ್ರೈಮಾಸಿಕ ಡಿಸಿಸಿ –ಡಿ.ಎಲ್.ಆರ್.ಸಿ. ಪ್ರಗತಿ ಪರಿಶೀಲನೆ ಮಾಡಿದರು. ವಿವಿಧ ಯೋಜನೆಗಳ ಪ್ರಗತಿಯ ಕುರಿತು ಮಾಹಿತಿ ಪಡೆದು, ಪ್ರಗತಿ ಸಾಧಿಸಲು ಸಲಹೆ, ಸೂಚನೆಗಳನ್ನು ನೀಡಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ಶಿಂಧೆ ಅವರು ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ವಿವಿಧ ಬ್ಯಾಂಕುಗಳ ಅಧಿಕಾರಿಗಳಿಗೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳಿಗೆ 2026-27ನೇ ಸಾಲಿನಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ನಿರ್ದೇಶನಗಳನ್ನು ನೀಡಿದರು.

ಜಿಲ್ಲಾ ವಾರ್ಷಿಕ ಸಾಲಯೋಜನೆ ಬುಕಲೆಟ್ ಬಿಡುಗಡೆ:
2026-27ನೇ ಸಾಲಿನ ಜಿಲ್ಲಾ ವಾರ್ಷಿಕ ಸಾಲ ಯೋಜನೆಯ ಮಾಹಿತಿ ಒಳಗೊಂಡಿರುವ ಬುಕಲೆಟ್ ನ್ನು ಸಂಸದರಾದ ಜಗದೀಶ ಶೆಟ್ಟರ್ ರವರು ಬಿಡುಗಡೆಗೊಳಿಸಿದರು. 2026-27ನೇ ಸಾಲಿನ ಜಿಲ್ಲಾ ಸಾಲ ಯೋಜನೆಯ ಯೋಜನಾ ವೆಚ್ಚವಾಗಿ 37,035 ಕೋಟಿ ರೂ. ಗುರಿ ನೀಡಲಾಗಿದೆ. ಇದರಲ್ಲಿ ಆದ್ಯತಾ ವಲಯಕ್ಕೆ 22,123 ಕೋಟಿ ರೂ., ಕೃಷಿಗೆ 14,806 ಕೋಟಿ ರೂ. ನಿಗದಿಪಡಿಸಲಾಗಿದೆ. ಲಭ್ಯವಿರುವ ಸಂಪನ್ಮೂಲಗಳ ಅತ್ಯುತ್ತಮ ಬಳಕೆಯನ್ನು ಗುರಿಯಾಗಿಟ್ಟುಕೊಂಡು ಈ ಯೋಜನೆಯು ಆದ್ಯತಾ ವಲಯದಲ್ಲಿ 11.08% ಮತ್ತು ಕೃಷಿಯಲ್ಲಿ 10.99% ರಷ್ಟು ಬೆಳವಣಿಗೆಯನ್ನು ನಿರೀಕ್ಷಿಸಲಾಗಿದೆ.

ಅತಿ ಹೆಚ್ಚು ನೋಂದಣಿ ಮಾಡಿಸಿದ ಬ್ಯಾಂಕ್ ಗಳಿಗೆ ಪ್ರಶಸ್ತಿ ವಿತರಣೆ:

ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಹಾಗೂ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ (PMJJBY) ಯಡಿ ಈವರೆಗೆ ಅತಿಹೆಚ್ಚು ನೋಂದಣಿ ಮಾಡಿಸಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್, ಕೆನರಾ ಬ್ಯಾಂಕ್ ಹಾಗೂ ಸ್ಟೇಟ್ ಬ್ಯಾಂಕ್ ಗಳಿಗೆ ಪ್ರಶಸ್ತಿ ಪ್ರದಾನ ಮಾಡಿ, ಅಭಿನಂದಿಸಲಾಯಿತು.

ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಶಾಂತ ಘೋಡಕೆ, ನಬಾರ್ಡ್ ಡಿಡಿಎಮ್ ಅಭಿನವ ಯಾದವ, ಕೆನರಾ ಬ್ಯಾಂಕ್ ಬೆಳಗಾವಿ ಪ್ರಾದೇಶಿಕ ಕಚೇರಿಯ ಡೆಪ್ಯೂಟಿ ಜನರಲ್ ಮ್ಯಾನೇಜರ್ ಮುನುಗಪತಿ ಚಂದ್ರಶೇಖರ್, ವಿವಿಧ ಬ್ಯಾಂಕುಗಳ ಪ್ರಾದೇಶಿಕ ಕಚೇರಿಯ ವ್ಯವಸ್ಥಾಪಕರು, ಶಾಖಾ ವ್ಯವಸ್ಥಾಪಕರು ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.**********************************

Leave a Reply

Your email address will not be published. Required fields are marked *

Back to top button