ಪ್ರಕೃತಿ ಬೆಳಗಾವಿ

*ಸಂಕೇಶ್ವರ ಪತ್ನಿಯ ಜೊತೆ ಅನೈತಿಕ ಸಂಬಂಧ: ಸ್ನೇಹಿತನ ಜೊತೆಗೂಡಿ ವ್ಯಕ್ತಿಯ ಭೀಕರ ಹತ್ಯೆ*

ಪ್ರಕೃತಿ ಬೆಳಗಾವಿ ಸುದ್ದಿ : ಸಂಕೇಶ್ವರ : ಪತ್ನಿಯ ಅನೈತಿಕ ಸಂಬಂಧದ ಶಂಕೆ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿದ ಬೆಚ್ಚಿಬೀಳಿಸುವ ಘಟನೆ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಸುಮಾರು 1 ಗಂಟೆ ಸುಮಾರಿಗೆ ಈ ಕೊಲೆ ನಡೆದಿದ್ದು, ಪ್ರಕರಣ ಸಂಬಂಧ ಸಂಕೇಶ್ವರ ಪೊಲೀಸ್ ಠಾಣೆಯ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

ಹತ್ಯೆಗೆ ಒಳಗಾದ ವ್ಯಕ್ತಿಯನ್ನು ಬಾಬು ಭುಸಗೋಳ (35) ಎಂದು ಗುರುತಿಸಲಾಗಿದೆ. ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಪತಿಯೊಬ್ಬನು ತನ್ನ ಸ್ನೇಹಿತನ ಜೊತೆಗೂಡಿ ಬಾಬು ಭುಸಗೋಳನನ್ನು ಹತ್ಯೆ ಮಾಡಿದ್ದಾನೆ ಎಂಬ ಮಾಹಿತಿ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸಂಕೇಶ್ವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿ, ಕೊಲೆಗೆ ನಿಖರ ಕಾರಣ ಹಾಗೂ ಘಟನೆಯ ಹಿನ್ನೆಲೆ ಕುರಿತು ತನಿಖೆ ಕೈಗೊಂಡಿದ್ದಾರೆ.

ಈ ಘಟನೆ ಸಂಕೇಶ್ವರ ಭಾಗದಲ್ಲಿ ಆತಂಕ ಸೃಷ್ಟಿಸಿದ್ದು, ಸ್ಥಳೀಯರಲ್ಲಿ ಬೆಚ್ಚಿಬೀಳುವಂತಾಗಿದೆ.****************************+

Leave a Reply

Your email address will not be published. Required fields are marked *

Back to top button