ಪ್ರಕೃತಿ ಬೆಳಗಾವಿ

*₹2.65 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ: ಕಾಕತಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ*

ಪ್ರಕೃತಿ ಬೆಳಗಾವಿ ಸುದ್ದಿ : ಯಮಕನಮರಡಿ : ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಸತೀಶ ಜಾರಕಿಹೊಳಿ ಅವರ ಮಾರ್ಗದರ್ಶನದ ಮೇರೆಗೆ, ಯಮಕನಮರಡಿ ಕ್ಷೇತ್ರದ ಕಾಕತಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್.ಡಿ.ಪಿ.ಆರ್.) ಯೋಜನೆಯಡಿ ಸುಮಾರು ₹2.65 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದ ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ.

ಹೊನಗಾ ಗ್ರಾಮದಲ್ಲಿ ₹45 ಲಕ್ಷ ವೆಚ್ಚದ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿ (ಕಚೇರಿ ಗಲ್ಲಿ ಹಾಗೂ ಜ್ಯೋತಿ ನಗರ 3ನೇ ಕ್ರಾಸ್), ಕಾಕತಿ ಗ್ರಾಮದಲ್ಲಿ ₹1 ಕೋಟಿ ವೆಚ್ಚದ ಸಿ.ಸಿ. ರಸ್ತೆ ಹಾಗೂ ರಸ್ತೆ ಡಾಂಬರೀಕರಣ ಕಾಮಗಾರಿ (ಚೆನ್ನಮ್ಮ ರಸ್ತೆ, ಪ್ಲಾಟ್ ಗಲ್ಲಿ ಹಾಗೂ ಬ್ರಹ್ಮ ಗಲ್ಲಿ), ಸೋನಟ್ಟಿ ಗ್ರಾಮದಲ್ಲಿ ₹20 ಲಕ್ಷ ವೆಚ್ಚದ ಸಿ.ಸಿ. ರಸ್ತೆ ನಿರ್ಮಾಣ, ಹಳೆಹೊಸೂರ್ ಗ್ರಾಮದಲ್ಲಿ ₹75 ಲಕ್ಷ ವೆಚ್ಚದ ಸಿ.ಸಿ. ರಸ್ತೆ ನಿರ್ಮಾಣ ಹಾಗೂ ವಿರನಬಾವಿ ಗ್ರಾಮದಲ್ಲಿ ₹25 ಲಕ್ಷ ವೆಚ್ಚದ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿದರು. ‌

ಈ ಅಭಿವೃದ್ಧಿ ಕಾಮಗಾರಿಗಳು ಗ್ರಾಮೀಣ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ ಸಾರ್ವಜನಿಕರಿಗೆ ಗುಣಮಟ್ಟದ ರಸ್ತೆ ಹಾಗೂ ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಲಿವೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ಕಾಕತಿ ಬ್ಲಾಕ್ ಅಧ್ಯಕ್ಷರು, ಮಾಜಿ ತಾಲೂಕು ಪಂಚಾಯತ್ ಸದಸ್ಯರು, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ವಿವಿಧ ಗ್ರಾಮಗಳ ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಹಿರಿಯರು, ಯುವಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.*******************************

Leave a Reply

Your email address will not be published. Required fields are marked *

Back to top button