ಪ್ರಕೃತಿ ಬೆಳಗಾವಿ
*ವ್ಯಾಪಕ ಮಳೆ: ಬೆಳಗಾವಿ, ಖಾನಾಪುರ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ ಜುಲೈ 6 : ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ತಾಲ್ಲೂಕು ಮತ್ತು ಖಾನಾಪುರ ತಾಲ್ಲೂಕಿನ ನಗರ ಹಾಗೂ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳು/ಪ್ರಾಥಮಿಕ/ಪ್ರೌಢಶಾಲೆಗಳು ಹಾಗೂ ಪಿಯುಸಿ (12ನೇ ತರಗತಿಯವರೆಗಿನ) ಕಾಲೇಜುಗಳಿಗೆ ಮಂಗಳವಾರ(ಜುಲೈ 7) ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ******************************






