*ಜನರ ಸುರಕ್ಷತೆ ನಮ್ಮ ಮೊದಲ ಆದ್ಯತೆ *

ಪ್ರಕೃತಿ ಬೆಳಗಾವಿ ಸುದ್ದಿ : ಇಂದು ಹುಕ್ಕೇರಿ ತಾಲೂಕಿನ ಕಮತನೂರ ಕ್ರಾಸ್‌ನಿಂದ ಗೋಟೂರ ರಸ್ತೆವರೆಗೆ ಖುದ್ದಾಗಿ ಭೇಟಿ ನೀಡಿ ರಸ್ತೆ ಸ್ಥಿತಿಯನ್ನು ಪರಿಶೀಲಿಸಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ.
ಗುತ್ತಿಗೆದಾರರ ಜೊತೆಗೆ ಚರ್ಚಿಸಿದ ನಂತರ ಸ್ಥಳದಿಂದಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಸಂಪರ್ಕಿಸಿ, ರಸ್ತೆಯ ದುಸ್ಥಿತಿಯ ಬಗ್ಗೆ ಸಮಗ್ರ ಅವಲೋಕನ ನಡೆಸಿ, ಶೀಘ್ರದಲ್ಲೇ ದುರಸ್ತಿ ಕಾಮಗಾರಿ ಆರಂಭಿಸಿ ವಾಹನ ಸವಾರರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ.
ಈ ರಸ್ತೆಯಲ್ಲಿ ಪದೇಪದೇ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಇಂದು ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿದೆ. ಸುರಕ್ಷಿತ ಸಂಚಾರಕ್ಕೆ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕೆ ಹಾಗೂ ಶಾಶ್ವತ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಈ ಹಿಂದೆಯೂ ಸಾರ್ವಜನಿಕರಿಂದ ರಸ್ತೆ ದುಸ್ಥಿತಿಯ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿ ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು. ಆದರೂ ಸಮಸ್ಯೆ ಮರುಕಳಿಸಿರುವುದರಿಂದ ಶಾಶ್ವತ ಪರಿಹಾರಕ್ಕೆ ಆದ್ಯತೆ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.********************************





