ಪ್ರಕೃತಿ ಬೆಳಗಾವಿ
*ಮಳೆ ಕೊರತೆ: ಬ್ರಿಡ್ಜ್-ಕಮ್-ಬ್ಯಾರೇಜ್ಗಳ ಗೇಟ್ಗಳನ್ನು ಬಂದ್ ಮಾಡಲು ಸಚಿವ ಸತೀಶ್ ಜಾರಕಿಹೊಳಿ ಸೂಚನೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ನದಿಗಳ ನೀರಿನ ಹರಿವು ಇಳಿಮುಖವಾಗಿರುವುದನ್ನು ಗಮನಿಸಿ, ಬ್ರಿಡ್ಜ್-ಕಮ್-ಬ್ಯಾರೇಜ್ಗಳ ಗೇಟ್ಗಳನ್ನು ಅಗತ್ಯಕ್ಕೆ ಅನುಗುಣವಾಗಿ ಬಂದ್ ಮಾಡಿ ನೀರಿನ ಸಂರಕ್ಷಣೆ ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನೀರಿನ ಲಭ್ಯತೆಯನ್ನು ಸಮರ್ಪಕವಾಗಿ ನಿರ್ವಹಿಸುವ ಉದ್ದೇಶದಿಂದ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದ್ದಾರೆ.***********************************





