ಪ್ರಕೃತಿ ಬೆಳಗಾವಿ

*ಮಾಜಿ ಪ್ರಧಾನಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ನಿಧನಕ್ಕೆ ಸಂಸದ ಜಗದೀಶ ಶೆಟ್ಟರ್ ಸಂತಾಪ*

ಪ್ರಕೃತಿ ಬೆಳಗಾವಿ ಸುದ್ದಿ : ಮಾಜಿ ಪ್ರಧಾನಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು.

ದೇವೇಗೌಡರ ಅರ್ಧಾಂಗಿಯಾಗಿ ಅವರ ಏಳಿಗೆಗೆ ಬೆನ್ನೆಲುಬಾಗಿ ನಿಂತು ಕುಟುಂಬವನ್ನು ಮುನ್ನಡೆಸಿದ ಮಾತೃ ಸ್ವರೂಪಿ ಚೆನ್ನಮ್ಮ ಅವರು 85 ವರ್ಷಗಳ ಸಾರ್ಥಕ ಬದುಕನ್ನು ನಡೆಸಿ, ಮಾದರಿಯಾಗಿದ್ದಾರೆ.

ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ, ಕುಟುಂಬಸ್ಥರಿಗೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ, ಅವರ ಕುಟುಂಬದ ದುಃಖದಲ್ಲಿ ನಾನು ಸಹ ಭಾಗಿ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಲೋಕಸಭಾ ಸಂಸದರಾದ ಜಗದೀಶ ಶೆಟ್ಟರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.**********************************

Leave a Reply

Your email address will not be published. Required fields are marked *

Back to top button