ಪ್ರಕೃತಿ ಬೆಳಗಾವಿ

*ನಿಪ್ಪಾಣಿ ಮೊದಲ ಮಳೆಗೆ ಕುಸಿದ ರಾಷ್ಟ್ರೀಯ ನೂತನ ಹೆದ್ದಾರಿ; ಒಂದೇ ವಾಹನ ಸಂಚರಿಸದಿರುವುದು ವಿಶೇಷ*

ಪ್ರಕೃತಿ ಬೆಳಗಾವಿ ಸುದ್ದಿ : ನಿಪ್ಪಾಣಿ : ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನಿಪ್ಪಾಣಿ ಭಾಗದ ನೂತನ ರಾಷ್ಟ್ರೀಯ ಹೆದ್ದಾರಿ ಮೊದಲ ಮಳೆಯಲ್ಲೇ ಕುಸಿದಿರುವ ಘಟನೆ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಇನ್ನೂ ಈ ಹೆದ್ದಾರಿಯನ್ನು ಅಧಿಕೃತವಾಗಿ ವಾಹನಗಳ ಸಂಚಾರಕ್ಕೆ ತೆರೆಯದಿರುವ ಕಾರಣ, ಯಾವುದೇ ವಾಹನ ಈ ಮಾರ್ಗದಲ್ಲಿ ಸಂಚರಿಸಿರಲಿಲ್ಲ. ಹೀಗಾಗಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಹೆದ್ದಾರಿಯ ಗುಣಮಟ್ಟದ ಕಾಮಗಾರಿ ಕುರಿತು ಸಾರ್ವಜನಿಕರು ಅನುಮಾನ ವ್ಯಕ್ತಪಡಿಸಿದ್ದು, ನಿರ್ಮಾಣ ಕಾಮಗಾರಿಯಲ್ಲಿ ನಿರ್ಲಕ್ಷ್ಯ ನಡೆದಿದೆಯೇ ಎಂಬ ಪ್ರಶ್ನೆ ಎದ್ದಿದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಸಿತಕ್ಕೆ ನಿಖರ ಕಾರಣ ಪತ್ತೆಹಚ್ಚಿ, ಗುಣಮಟ್ಟದ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಮೊದಲ ಮಳೆಯಲ್ಲೇ ರಾಷ್ಟ್ರೀಯ ಹೆದ್ದಾರಿ ಕುಸಿದಿರುವ ಘಟನೆ ಕಾಮಗಾರಿಯ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.**********************************

Leave a Reply

Your email address will not be published. Required fields are marked *

Back to top button