ಪ್ರಕೃತಿ ಬೆಳಗಾವಿ

*ಮರಡಿಮಠ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ: ತಂದೆ-ಮಗಳು ಸ್ಥಳದಲ್ಲೇ ದುರ್ಮರಣ*

ಪ್ರಕೃತಿ ಬೆಳಗಾವಿ ಸುದ್ದಿ : ಗೋಕಾಕ್ ತಾಲ್ಲೂಕಿನ ಮರಡಿಮಠ ಗ್ರಾಮದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ ಹಾಗೂ ಮಗಳು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಮೃತರು ಬೈಕ್‌ನಲ್ಲಿ ಫೋರ್ಬ್ಸ್ ಅಕಾಡೆಮಿ ಶಾಲೆಯಿಂದ ಮಗಳನ್ನು ಕರೆದುಕೊಂಡು ಕೊಣ್ಣೂರ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪತ್ನಿಯನ್ನು ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.*********************************

Leave a Reply

Your email address will not be published. Required fields are marked *

Back to top button