ಪ್ರಕೃತಿ ಬೆಳಗಾವಿ

*ಸಚಿವ ಸ್ಥಾನ ನೀಡುವಂತೆ ಆಗ್ರಹ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರಿಂದ ಅರೆಬೆತ್ತಲೆ ಪ್ರತಿಭಟನೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಅವರ ಬೆಂಬಲಿಗರು ಅರೆಬೆತ್ತಲೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ ತಾಲ್ಲೂಕಿನ ಬಡಸ ಕೆ.ಎಚ್. ಕ್ರಾಸ್ ಬಳಿ ಪ್ರತಿಭಟನೆ ಮುಂದುವರಿದಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಇಂತಹ ನಾಯಕಿಗೆ ಸಚಿವ ಸ್ಥಾನ ನೀಡದೇ ಇರುವುದು ಅವರ ಬೆಂಬಲಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.
ಈ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಬೆಂಬಲಿಗರು ಅರೆಬೆತ್ತಲೆ ಪ್ರತಿಭಟನೆ ನಡೆಸಿ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ನಾಯಕತ್ವದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಳಗಾವಿ ಕಾಂಗ್ರೆಸ್‌ನ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಮನ್ಸೂರ್ ಅಲಿ ಅತ್ತಾರ, ಅಶೋಕ್ ಅಂಗಡಿ, ಪರ್ವತ ಗೌಡ ಪಾಟೀಲ್, ರವಿ ಮೇಳೇದ್, ಪ್ರಕಾಶ್ ಪಾಟೀಲ್, ಬಸವಂತ ನಾಯಕ್ ಸೇರಿದಂತೆ ವಿವಿಧ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಅವರ ರಾಜಕೀಯ ಹಾಗೂ ಸಂಘಟನಾ ಸಾಮರ್ಥ್ಯಕ್ಕೆ ಸೂಕ್ತ ಮನ್ನಣೆ ನೀಡಬೇಕು. ಇಲ್ಲದಿದ್ದರೆ ಪ್ರತಿಭಟನೆ ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.*************************************

Leave a Reply

Your email address will not be published. Required fields are marked *

Back to top button