*ಶಾಬಂದರ್ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಉಚಿತ ಶೈಕ್ಷಣಿಕ ಸಾಮಗ್ರಿ ವಿತರಣೆ*

ಪ್ರಕೃತಿ ಬೆಳಗಾವಿ ಸುದ್ದಿ : ಶಾಬಂದರ್ : ಯಮಕನಮರಡಿ ಮತ ಕ್ಷೇತ್ರದ ಶಾಬಂದರ್
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಗ್ರಾಮದ ದಾನಿಗಳಾದ ಮಾರುತಿ ಬುಕ್ಕನಟ್ಟಿ ಸೇರಿದಂತೆ ಹಲವಾರು ದಾನಿಗಳು ತಮ್ಮ ಸ್ವಇಚ್ಛೆಯಿಂದ ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್, ಟೈ, ಬೆಲ್ಟ್ ಹಾಗೂ ಟೀ-ಶರ್ಟ್‌ಗಳನ್ನು ಉಚಿತವಾಗಿ ವಿತರಿಸಿದರು. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹಾಗೂ ಅಗತ್ಯ ವಸ್ತುಗಳನ್ನು ಒದಗಿಸುವ ನಿಟ್ಟಿನಲ್ಲಿ ದಾನಿಗಳು ಕೈಗೊಂಡ ಈ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ಶೈಕ್ಷಣಿಕ ಆಪ್ತ ಸಹಾಯಕರಾದ ಶ್ರೀ ಜಂಗ್ಲಿ ಸಾಬ್ ನಾಯಕ್, ಶ್ರೀ ಲಗಮಣ್ಣ ಪಣಗುದ್ದಿ, ಸಮೂಹ ಸಂಪನ್ಮೂಲ ಅಧಿಕಾರಿಗಳಾದ ನಾಯಕ್ ಸರ್, ಗ್ರಾಮದ ಹಿರಿಯರು, ಎಸ್ ಡಿ ಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದಾನಿಗಳ ಈ ಸೇವಾ ಕಾರ್ಯವು ವಿದ್ಯಾರ್ಥಿಗಳಲ್ಲಿ ಸಂತಸ ಮೂಡಿಸುವುದರ ಜೊತೆಗೆ, ಶಿಕ್ಷಣದ ಜೊತೆಗೆ ಸಾಮಾಜಿಕ ಜವಾಬ್ದಾರಿಯ ಮಹತ್ವವನ್ನು ಸಾರಿತು.*************************************






