ಪ್ರಕೃತಿ ಬೆಳಗಾವಿ

*ಬೀದಿ ನಾಯಿಗಳ ದಾಳಿಗೆ 10 ವರ್ಷದ ಬಾಲಕ ಗಾಯ*

ಪ್ರಕೃತಿ ಬೆಳಗಾವಿ ಸುದ್ದಿ : ಹುಕ್ಕೇರಿ : ತಾಲೂಕಿನ ಹುಲ್ಲೋಳಿ ಹಟ್ಟಿ ಗ್ರಾಮದಲ್ಲಿ ಬೀದಿ ನಾಯಿಗಳು 10 ವರ್ಷದ ಬಾಲಕನ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ.

ಅಕ್ಷಯ ಚಂದು ಬ್ಯಲಪತ್ತಾರ ಎಂಬ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಬಾಲಕ ಗಾಯಗೊಂಡಿದ್ದಾನೆ. ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇಂತಹ ಘಟನೆಗಳು ನಡೆಯುತ್ತಿದ್ದರೂ ಬೆಳಕಿಗೆ ಬಂದಿರಲಿಲ್ಲ ಎನ್ನಲಾಗಿದೆ.

ನಾಯಿಗಳ ದಾಳಿಯಿಂದ ಗಾಯಗೊಂಡ ಬಾಲಕನಿಗೆ ಹುಕ್ಕೇರಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರು ಆತಂಕಗೊಂಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ನಾಯಿಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.*********************************

Leave a Reply

Your email address will not be published. Required fields are marked *

Back to top button