ಪ್ರಕೃತಿ ಬೆಳಗಾವಿ

*ಅಂಗನವಾಡಿ ಕೇಂದ್ರಗಳಿಗೆ 13 ಸ್ಮಾರ್ಟ್ ಟಿವಿ ವಿತರಿಸಿದ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

ಪ್ರಕೃತಿ ಬೆಳಗಾವಿ ಸುದ್ದಿ : ಗೋಕಾಕ : ಮಕ್ಕಳ ಶಾಲಾ ಪೂರ್ವ ಶಿಕ್ಷಣಕ್ಕೆ ಅನುಕೂಲವಾಗುವಂತೆ ಅಂಗನವಾಡಿ ಕೇಂದ್ರಗಳಿಗೆ ಸ್ಮಾರ್ಟ್ ಟಿವಿಗಳನ್ನು ವಿತರಿಸಲಾಗುತ್ತಿದೆ ಎಂದು ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಅರಭಾವಿ ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ನಗರದ ಎನ್‌ಎಸ್‌ಎಫ್ ಕಚೇರಿಯಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂಗನವಾಡಿ ಕೇಂದ್ರಗಳಲ್ಲಿ ಗುಣಮಟ್ಟದ ಶಾಲಾ ಪೂರ್ವ ಶಿಕ್ಷಣ ನೀಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಅರಭಾವಿ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯ ದುರದುಂಡಿ, ಬಳೋಬಾಳ, ಸುಣಧೋಳಿ, ಹಳ್ಳೂರ, ಹುಣಶ್ಯಾಳ ಪಿ.ವೈ., ಕೌಜಲಗಿ, ಮೂಡಲಗಿ, ಮೆಳವಂಕಿ, ಕಲ್ಲೊಳ್ಳಿ, ಹುಣಶ್ಯಾಳ ಪಿ.ಜಿ., ತುಕ್ಕಾನಟ್ಟಿ ಹಾಗೂ ಅವರಾದಿ ಅಂಗನವಾಡಿ ಕೇಂದ್ರಗಳಿಗೆ ಒಟ್ಟು 13 ಸ್ಮಾರ್ಟ್ ಟಿವಿಗಳನ್ನು ವಿತರಿಸಲಾಯಿತು.
ಮಕ್ಕಳಿಗೆ ಆಧುನಿಕ ತಂತ್ರಜ್ಞಾನದ ಮೂಲಕ ಗುಣಮಟ್ಟದ ಶಾಲಾ ಪೂರ್ವ ಶಿಕ್ಷಣ ಒದಗಿಸುವ ಉದ್ದೇಶದಿಂದ ತಮ್ಮ ಸ್ವಂತ ವೆಚ್ಚದಲ್ಲಿ ಸ್ಮಾರ್ಟ್ ಟಿವಿಗಳನ್ನು ವಿತರಿಸಲಾಗುತ್ತಿದೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಈ ಸಂದರ್ಭದಲ್ಲಿ ಅರಭಾವಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಯಲ್ಲಪ್ಪ ಗದಾಡಿ, ಅಂಗನವಾಡಿ ಮೇಲ್ವಿಚಾರಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.********************************

Leave a Reply

Your email address will not be published. Required fields are marked *

Back to top button