*80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಮಾಜಮುಖಿ ಕಾರ್ಯಕ್ರಮ*

ಪ್ರಕೃತಿ ಬೆಳಗಾವಿ ಸುದ್ದಿ : 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನೆಕ್ಸೀಡ್ ವೆಲ್ಫೇರ್ ಫೌಂಡೇಶನ್ ವತಿಯಿಂದ ಹುಕ್ಕೇರಿ ತಾಲೂಕಿನ ಶಿರೂರು ಗ್ರಾಮದ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಶುದ್ಧ ಕುಡಿಯುವ ನೀರಿನ ಯಂತ್ರದ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು, ಶಾಲೆಯ ಎಸ್.ಡಿ.ಎಂ.ಸಿ. ಸದಸ್ಯರು, ನೆಕ್ಸೀಡ್ ವೆಲ್ಫೇರ್ ಫೌಂಡೇಶನ್ನ ಅಧ್ಯಕ್ಷರಾದ ಶೈಲೇಂದ್ರ ಮಿರಜಕರ, ಈರಣ್ಣ ಜೊಂಡ, ಸುನಿಲ್ ಆರ್, ಪದಾಧಿಕಾರಿಗಳಾದ ಶಾಂತಿನಾಥ ಅನಗೋಕರ, ಗಜೇಂದ್ರ ಪಾಟೀಲ, ಪ್ರವೀಣ್ ಜೊಂಡ, ಮಂಜುನಾಥ್ ಚಿನಿವಾಲ್, ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ಗ್ರಾಮದ ಗುರು-ಹಿರಿಯರು ಮತ್ತು ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ವಿದ್ಯಾರ್ಥಿಗಳ ಆರೋಗ್ಯದ ಕಾಳಜಿ ಹಾಗೂ ಅವರಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಉದ್ದೇಶದಿಂದ ಹಮ್ಮಿಕೊಂಡ ಈ ಸಮಾಜಮುಖಿ ಕಾರ್ಯಕ್ರಮವು ಅರ್ಥಪೂರ್ಣವಾಗಿ ನೆರವೇರಿತು.
ನೆಕ್ಸೀಡ್ ವೆಲ್ಫೇರ್ ಫೌಂಡೇಶನ್ ವತಿಯಿಂದ ಸಮಾಜದ ಆರೋಗ್ಯ, ಶಿಕ್ಷಣ ಮತ್ತು ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗಾಗಿ ಇಂತಹ ಜನಪರ ಕಾರ್ಯಕ್ರಮಗಳನ್ನು ಮುಂದುವರಿಸುವ ಸಂಕಲ್ಪ ಮಾಡಲಾಯಿತು.*******************************






