ಪ್ರಕೃತಿ ಬೆಳಗಾವಿ

*ಅಪಘಾತದಲ್ಲಿ ಗಾಯಗೊಂಡ ಯುವಕನ ಕುಟುಂಬಕ್ಕೆ ಲಕ್ಷ್ಮೀ ಹೆಬ್ಬಾಳಕರ್ ನೆರವು*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಕಂಗ್ರಾಳಿ ಕೆ.ಎಚ್. ಗ್ರಾಮದ ಯುವಕ ಬಸವಂತ ಅಶೋಕ ಚೌಗುಲೆ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದು, ಸಂಕಷ್ಟದಲ್ಲಿರುವ ಅವರ ಕುಟುಂಬಕ್ಕೆ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತುರ್ತು ಆರ್ಥಿಕ ನೆರವು ನೀಡಿದರು.

ಬಸವಂತ ಅವರ ತಾಯಿ ಕಮಲ್ ಅಶೋಕ್ ಚೌಗುಲೆ ಅವರು ಇಂದು ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾಗಿ, ತಮ್ಮ ಕುಟುಂಬದ ದುಸ್ಥಿತಿ ಹಾಗೂ ಮಗನ ಚಿಕಿತ್ಸೆಗೆ ಎದುರಾಗಿರುವ ಆರ್ಥಿಕ ಸಮಸ್ಯೆಗಳನ್ನು ವಿವರಿಸಿದರು.

ಬಡ ಕುಟುಂಬಕ್ಕೆ ಆಸರೆಯಾಗಿದ್ದ ಯುವಕ ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಕುಟುಂಬ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದನ್ನು ಅರಿತ ಲಕ್ಷ್ಮೀ ಹೆಬ್ಬಾಳಕರ್ ಅವರು, ತಕ್ಷಣ ಸ್ಪಂದಿಸಿ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ತುರ್ತು ಆರ್ಥಿಕ ನೆರವು ಒದಗಿಸಿದರು.
ಬಸವಂತ ಅವರು ಶೀಘ್ರ ಗುಣಮುಖರಾಗಿ ಮತ್ತೆ ತಮ್ಮ ಕುಟುಂಬಕ್ಕೆ ಆಸರೆಯಾಗಲಿ ಎಂದು ಹಾರೈಸಿದ ಅವರು, ಯುವಕನ ಆರೋಗ್ಯಕ್ಕಾಗಿ ಭಗವಂತನಲ್ಲಿ ಪ್ರಾರ್ಥಿಸಿದರು.******************************

Leave a Reply

Your email address will not be published. Required fields are marked *

Back to top button