ಪ್ರಕೃತಿ ಬೆಳಗಾವಿ
*ರೈಲ್ವೆ ಅಪಘಾತದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಸಾಂತ್ವನ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಕೊಂಡಸಕೊಪ್ಪ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ರಮೇಶ್ ದೇವಪ್ಪ ಪಾಟೀಲ ಅವರ 17 ವರ್ಷದ ಪುತ್ರ ರೋಹಿತ್ ಪಾಟೀಲ ಇತ್ತೀಚೆಗೆ ಸಂಭವಿಸಿದ ರೈಲ್ವೆ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಬಾಳಿ ಬದುಕಬೇಕಾದ ಚಿಕ್ಕ ವಯಸ್ಸಿನಲ್ಲೇ ರೋಹಿತ್ ಅವರನ್ನು ಕಳೆದುಕೊಂಡಿರುವುದು ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ವಿಷಾದಿಸಿದ ಅವರು, ದುಃಖತಪ್ತ ಕುಟುಂಬದ ಸದಸ್ಯರಿಗೆ ಧೈರ್ಯ ತುಂಬಿದರು.
ಮೃತ ರೋಹಿತ್ ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲಿ ಹಾಗೂ ಪುತ್ರನನ್ನು ಕಳೆದುಕೊಂಡ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ಕರುಣಿಸಲಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಪ್ರಾರ್ಥಿಸಿದರು.*********************************






