ಪ್ರಕೃತಿ ಬೆಳಗಾವಿ

*ಯಮಕನಮರಡಿಯಲ್ಲಿ 23 ಸಾವಿರ ಮಕ್ಕಳಿಗೆ ಉಚಿತ ಸಮವಸ್ತ್ರ, ಶಾಲಾ ಬ್ಯಾಗ್ ವಿತರಣೆ*

ಪ್ರಕೃತಿ ಬೆಳಗಾವಿ ಸುದ್ದಿ : ಯಮಕನಮರಡಿ : ಚಿಕ್ಕೋಡಿ ಲೋಕಸಭಾ ಸದಸ್ಯರಾದ ಪ್ರಿಯಾಂಕಾ ಜಾರಕಿಹೊಳಿ ಅವರು ಯಮಕನಮರಡಿ ಗ್ರಾಮದ ಸರ್ಕಾರಿ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಯೋಜನೆಯಡಿ 1ರಿಂದ 5ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಶಾಲಾ ಬ್ಯಾಗ್‌ಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಯಮಕನಮರಡಿ ಮತಕ್ಷೇತ್ರದ ಸುಮಾರು 23,000 ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಶಾಲಾ ಬ್ಯಾಗ್‌ಗಳನ್ನು ವಿತರಿಸುವ ಈ ಯೋಜನೆಯು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಮಹತ್ವದ ಹೆಜ್ಜೆಯಾಗಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳಿಗೆ ಶೈಕ್ಷಣಿಕ ಅಗತ್ಯಗಳನ್ನು ಪೂರೈಸುವ ಮೂಲಕ ಅವರ ವಿದ್ಯಾಭ್ಯಾಸಕ್ಕೆ ಮತ್ತಷ್ಟು ಪ್ರೋತ್ಸಾಹ ನೀಡುವ ಉದ್ದೇಶವನ್ನು ಈ ಯೋಜನೆ ಹೊಂದಿದೆ.

ಕಾರ್ಯಕ್ರಮದಲ್ಲಿ ಯಮಕನಮರಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಾತೇಶ ಮಗದುಮ್ಮ, ಜಂಗಲಿಸಾಬ್ ನಾಯಿಕ, ಲಗಮಣ್ಣಾ ಪನಗುದ್ದಿ, ದಯಾನಂದ ಪಾಟೀಲ್, ಪ್ರಕಾಶ್ ಬಸ್ಸಾಪೂರೆ, ಮುಖಂಡರಾದ ಕಿರಣ್ ರಜಪೂತ, ಷರೀಫ್ ಬೇಪಾರಿ, ಗಿರೀಶ್ ಮಿಶ್ರಕೋಟೆ, ಈರಣ್ಣ ಬಿಸಿರೊಟ್ಟಿ, ರವಿ ಜಿಂಡ್ರಾಳೆ, ದೇವಪ್ಪ ಹುನ್ನೂರಿ, ದಸ್ತಗೀರ ಪಾಶ್ಚಾಪೂರೆ, ಬಿಇಒ ಶ್ರೀಮತಿ ಪ್ರಭಾವತಿ ಪಾಟೀಲ ಸೇರಿದಂತೆ ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ಹಲವರು ಉಪಸ್ಥಿತರಿದ್ದರು.********************************

Leave a Reply

Your email address will not be published. Required fields are marked *

Back to top button