ಪ್ರಕೃತಿ ಬೆಳಗಾವಿ

*₹2 ಕೋಟಿ ವೆಚ್ಚದಲ್ಲಿ ನೂತನ ದೇವಸ್ಥಾನ, ಸಭಾಮಂಟಪ ನಿರ್ಮಾಣ: ಚೆಕ್ ಹಸ್ತಾಂತರಿಸಿದ ಮೃಣಾಲ್‌ ಹೆಬ್ಬಾಳಕರ್*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಮಂಜೂರಾಗಿರುವ 2 ಕೋಟಿ ರೂ. ಅನುದಾನದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಂಗರಗಾ ಗ್ರಾಮದಲ್ಲಿ ನೂತನ ಶ್ರೀ ಕಲ್ಮೇಶ್ವರ ದೇವಸ್ಥಾನ ಹಾಗೂ ಸಭಾಮಂಟಪ ನಿರ್ಮಾಣವಾಗಲಿದೆ.

ಕಾಮಗಾರಿಯ ಮೊದಲ ಹಂತವಾಗಿ ₹19.81 ಲಕ್ಷ ಮೊತ್ತದ ಅನುದಾನದ ಚೆಕ್‌ನ್ನು ದೇವಸ್ಥಾನ ಕಮಿಟಿ ಸದಸ್ಯರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಹಸ್ತಾಂತರಿಸಿದರು.

ಗ್ರಾಮದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ನೂತನ ದೇವಸ್ಥಾನ ಮತ್ತು ಸಭಾಮಂಟಪ ನಿರ್ಮಾಣಗೊಳ್ಳಲಿದ್ದು, ಇದರಿಂದ ಗ್ರಾಮಸ್ಥರಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಭೆ-ಸಮಾರಂಭಗಳನ್ನು ಆಯೋಜಿಸಲು ಅನುಕೂಲವಾಗಲಿದೆ.

ಚೆಕ್ ಹಸ್ತಾಂತರ ಸಂದರ್ಭದಲ್ಲಿ ಕಾಡಾ ಅಧ್ಯಕ್ಷ ಯುವರಾಜ ಕದಂ, ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ದೇವಸ್ಥಾನ ನಿರ್ಮಾಣದ ಕಾಮಗಾರಿ ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುವ ವಿಶ್ವಾಸವನ್ನು ಸ್ಥಳೀಯರು ವ್ಯಕ್ತಪಡಿಸಿದರು. ವಿಶೇಷ ಅನುದಾನ ಮಂಜೂರು ಮಾಡಿಸಿದ್ದಕ್ಕಾಗಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಧನ್ಯವಾದ ಸಲ್ಲಿಸಿದರು.***********************************

Leave a Reply

Your email address will not be published. Required fields are marked *

Back to top button