ಪ್ರಕೃತಿ ಬೆಳಗಾವಿ

*ಗೋಕಾಕ್ ಗ್ರಾಮೀಣ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ*

ಪ್ರಕೃತಿ ಬೆಳಗಾವಿ ಸುದ್ದಿ : ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಗೆ ನೂತನ CPI ಆಗಿ ವಿಜಯಕುಮಾರ್ ಸಿನ್ನೂರ್ ಅವರನ್ನು ನೇಮಕ ಮಾಡಲಾಗಿದೆ.

ಇದಕ್ಕೂ ಮೊದಲು ಕರ್ತವ್ಯ ನಿರ್ವಹಿಸುತ್ತಿದ್ದ CPI ನೇಮಕರ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ವಿಜಯಕುಮಾರ್ ಸಿನ್ನೂರ್ ಅವರು ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ನೂತನ CPI ಅವರ ಮುಂದಿರುವ ಪ್ರಮುಖ ಸವಾಲುಗಳಾಗಿವೆ.

ನೂತನ CPI ವಿಜಯಕುಮಾರ್ ಸಿನ್ನೂರ್ ಅವರ ನೇಮಕಕ್ಕೆ ಸಾರ್ವಜನಿಕರು ಹಾಗೂ ಪೊಲೀಸ್ ಸಿಬ್ಬಂದಿಯಿಂದ ಶುಭಾಶಯಗಳು ವ್ಯಕ್ತವಾಗುತ್ತಿವೆ.********************************

Leave a Reply

Your email address will not be published. Required fields are marked *

Back to top button