*ಅಮಿತ್ ಶಾ ಬೆಳಗಾವಿ ಆಗಮನ: ಸೆ.19ರಂದು ವಿಶೇಷ ಕಾರ್ಯಕ್ರಮ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಸೆ.19ರಂದು ಬೆಳಗಾವಿ ಜಿಲ್ಲೆಗೆ ಆಗಮಿಸಲಿರುವುದು ವಿಶೇಷ ಗಮನ ಸೆಳೆದಿದೆ.
ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಸೆ.19ರಂದು ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರು ಭಾಗವಹಿಸಲಿದ್ದಾರೆ. ಅವರ ಆಗಮನದ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಭದ್ರತೆ ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ.
ಅಮಿತ್ ಶಾ ಅವರೊಂದಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಎಚ್.ಡಿ. ಕುಮಾರಸ್ವಾಮಿ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕೇಂದ್ರ ಸಹಕಾರ ರಾಜ್ಯ ಸಚಿವ ಮುರಳೀಧರ್ ಮೋಹೋಳ್, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಅಮಿತ್ ಶಾ ಅವರ ಬೆಳಗಾವಿ ಜಿಲ್ಲಾ ಪ್ರವಾಸ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಗಮನ ಸೆಳೆದಿದ್ದು, ಅವರ ಆಗಮನದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕುತೂಹಲ ಮೂಡಿದೆ.**********************************





