*ಅಕ್ರಮ ಮದ್ಯ ಮಾರಾಟಗಾರನ ಬಂಧನ: ಮಾರಿಹಾಳ ಪಿಎಸ್ಐ ಹಾಗೂ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ನಗರದ ಮಾರಿಹಾಳ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸರಾಯಿ ಮಾರಾಟ ಮಾಡುತ್ತಿದ್ದ ಸ್ಥಳದ ಮೇಲೆ ಪೊಲೀಸರು ಯಶಸ್ವಿ ದಾಳಿ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿರುವ ಘಟನೆ ನಡೆದಿದೆ.
ಚಂದೂರ ಗ್ರಾಮದ ಹನುಮಾನ ಗಲ್ಲಿಯ ನಿವಾಸಿ ಮಂಜುನಾಥ ಮಾರುತಿ ಕಾಶಿ (26) ಬಂಧಿತ ಆರೋಪಿಯಾಗಿದ್ದಾನೆ. ಈತನು ಚಂದೂರ ಗ್ರಾಮದ ‘ದುರ್ಗಾ ಹಿಲ್ ದಾಬಾ’ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ತನ್ನ ಲಾಭಕ್ಕಾಗಿ ಅಕ್ರಮವಾಗಿ ಕಳ್ಳಭಟ್ಟಿ ಸರಾಯಿಯನ್ನು ಮಾರಾಟ ಮಾಡಲು ನಿಂತಿದ್ದನು.
ದಿನಾಂಕ 21/09/2026 ರಂದು ಈ ಕುರಿತು ಖಚಿತ ಮಾಹಿತಿ ಪಡೆದ ಮಾರಿಹಾಳ ಪೊಲೀಸ್ ಠಾಣೆಯ ಪಿಎಸ್ಐ ಶ್ರೀ ಮಂಜುನಾಥ ಹುಲಕುಂದ ಹಾಗೂ ಅವರ ಸಿಬ್ಬಂದಿಯವರು ತಕ್ಷಣವೇ ಸ್ಥಳಕ್ಕೆ ತೆರಳಿ ಮಿಂಚಿನ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆರೋಪಿತನಿಂದ ಸುಮಾರು 20 ಲೀಟರ್ಗಳಷ್ಟು ಕಳ್ಳಭಟ್ಟಿ ಸರಾಯಿಯನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಈ ಕುರಿತು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ: 143/2026, ಕಲಂ 32, 34 ಕರ್ನಾಟಕ ಅಬಕಾರಿ ಕಾಯ್ದೆ-1965 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.
ಸಮಯೋಚಿತವಾಗಿ ದಾಳಿ ನಡೆಸಿ ಅಕ್ರಮ ಮದ್ಯ ಮಾರಾಟವನ್ನು ತಡೆದ ಪಿಎಸ್ಐ ಹಾಗೂ ಸಿಬ್ಬಂದಿಯವರ ಕಾರ್ಯವೈಖರಿಯನ್ನು ಬೆಳಗಾವಿ ನಗರದ ಪೊಲೀಸ್ ಆಯುಕ್ತರು ಮತ್ತು ಡಿಸಿಪಿ ರವರು ಬಹಿರಂಗವಾಗಿ ಶ್ಲಾಘಿಸಿದ್ದಾರೆ.**********************************





