*ಕೋಳಿ ಸಾಗಿಸುತ್ತಿದ್ದ ಬೊಲೆರೋ ಪಿಕಪ್ ಅಪಘಾತ ಒಬ್ಬ ಸ್ಥಳದಲ್ಲೇ ಸಾವು; ಇಬ್ಬರಿಗೆ ಗಂಭೀರ ಗಾಯ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ ಜಿಲ್ಲೆಯ ಖಾನಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೋಳಿ ಸಾಗಿಸುತ್ತಿದ್ದ ಬೊಲೆರೋ ಪಿಕಪ್ ವಾಹನ ಅಪಘಾತಕ್ಕೀಡಾಗಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ ಎನ್ನಲಾಗಿದೆ.
ಕೋಳಿಗಳನ್ನು ತುಂಬಿಕೊಂಡು ಗೋವಾ ರಾಜ್ಯಕ್ಕೆ ತೆರಳಿ, ಕೋಳಿಗಳನ್ನು ಖಾಲಿ ಮಾಡಿದ ಬಳಿಕ ಮತ್ತೆ ಕೋಳಿಗಳನ್ನು ತರಲು ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ರಾಮನಗರ–ಹುಬ್ಬಳ್ಳಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ ದಿನಾಂಕ 24 ಒಂಬತ್ತು 2026ರಂದು ಸಂಜೆ ಹೊತ್ತಿನಲ್ಲಿ ಈ ಅಪಘಾತ ನಡೆದಿದೆ ಎನ್ನಲಾಗಿದೆ.
ಅಪಘಾತದಲ್ಲಿ ಶಹಜಾನ್ ನಜಮುದ್ದೀನ್ ಕಿಲ್ಲೆದಾರ್ (49) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮೂಲದವರು ಎಂದು ತಿಳಿದುಬಂದಿದೆ.
ಘಟನೆ ಕುರಿತು ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.*******************************






