ಪ್ರಕೃತಿ ಬೆಳಗಾವಿ

*ಕತ್ತಲಲ್ಲಿ ಕಾಲ ಕಳೆಯುತ್ತಿರುವ ಕಾಕತಿ ಗ್ರಾಮಸ್ಥರು – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ತಾಲೂಕಿನ ಕಾಕತಿ ಗ್ರಾಮದ ಕಿಲ್ಲಾ ರೋಡ್ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಬೀದಿ ದೀಪಗಳು (ಗಲ್ಲಿ ಕಂಬದ ದೀಪಗಳು) ಉರಿಯದೆ ಇಡೀ ಬಡಾವಣೆ ಕತ್ತಲಲ್ಲಿ ಮುಳುಗಿದೆ. ಇದರಿಂದಾಗಿ ಸ್ಥಳೀಯ ಗ್ರಾಮಸ್ಥರು ಹಾಗೂ ಹಾದಿಹೋಕರು ತೀವ್ರ ಪರದಾಡುವಂತಾಗಿದೆ.

ರಾತ್ರಿ ವೇಳೆ ಕತ್ತಲಾವರಿಸುತ್ತಿರುವುದರಿಂದ ಹಿರಿಯ ನಾಗರಿಕರು, ಮಹಿಳೆಯರು ಮತ್ತು ಮಕ್ಕಳು ರಸ್ತೆಯಲ್ಲಿ ಓಡಾಡಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ. ಕತ್ತಲಿನ ಲಾಭ ಪಡೆದು ಕಿಡಿಗೇಡಿಗಳ ಹಾವಳಿ ಹೆಚ್ಚಾಗುವ ಹಾಗೂ ಅಪಘಾತಗಳು ಸಂಭವಿಸುವ ಭೀತಿ ಎದುರಾಗಿದೆ.​

ಈ ಸಮಸ್ಯೆಯ ಕುರಿತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ವಿದ್ಯುತ್ ಇಲಾಖೆಯ ಸಿಬ್ಬಂದಿ ತಕ್ಷಣವೇ ಎಚ್ಚೆತ್ತುಕೊಂಡು, ಸ್ಥಗಿತಗೊಂಡಿರುವ ಬೀದಿ ದೀಪಗಳನ್ನು ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ.*******************************

Leave a Reply

Your email address will not be published. Required fields are marked *

Back to top button