ಪ್ರಕೃತಿ ಬೆಳಗಾವಿ
ಕಬ್ಬಿನ ಗದ್ದೆಯಲ್ಲಿ ಮಹಿಳೆಯ ಶವ ಪತ್ತೆ: ಹಲವು ಅನುಮಾನ ?

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮಾಡಲಗಿ ಗ್ರಾಮದಲ್ಲಿ ಕಬ್ಬಿನ ಗದ್ದೆಯೊಂದರಲ್ಲಿ ಮಹಿಳೆಯ ಶವ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಮೃತ ಮಹಿಳೆಯನ್ನು ಕಲ್ಲವ್ವಾ ಸದಾಶಿವ ಮರಡಿ ಎಂದು ಗುರುತಿಸಲಾಗಿದೆ. ಕಬ್ಬಿನ ಗದ್ದೆಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವುದು ಗ್ರಾಮದಲ್ಲಿ ಆತಂಕ ಮೂಡಿಸಿದೆ.
ಮಹಿಳೆಯ ಸಾವು ಕೊಲೆಯ ಶಂಕೆ ಹುಟ್ಟಿಸಿದ್ದು, ಸಾವಿಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ರಾಯಬಾಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಿಳೆಯ ಸಾವಿನ ಹಿಂದಿನ ಕಾರಣ, ಇದು ಕೊಲೆಯೇ ಅಥವಾ ಬೇರೆ ಯಾವುದಾದರೂ ಕಾರಣದಿಂದ ಸಂಭವಿಸಿದ ಸಾವೇ ಎಂಬುದರ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪೊಲೀಸ್ ತನಿಖೆಯ ಬಳಿಕವಷ್ಟೇ ಘಟನೆಯ ಸಂಪೂರ್ಣ ವಿವರಗಳು ತಿಳಿದುಬರಬೇಕಿದೆ.******************************






