ಪ್ರಕೃತಿ ಬೆಳಗಾವಿ
*ಸಂಚಾರ ಉಲ್ಲಂಘಿಸಿದ ವಾಹನಗಳಿಗೆ ಶಾಕ್ ಕೊಟ್ಟ ಆರ್ ಟಿ ಒ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನಗಳನ್ನು ರಸ್ತೆಗಿಳಿಸುವ ವಾಹನ ಮಾಲೀಕರಿಗೆ ಬಿಸಿ ಮುಟ್ಟಿಸಲು ಚಿಕ್ಕೋಡಿ ಆರ್ಟಿಒ ಅಧಿಕಾರಿಗಳು ಮುಂದಾಗಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ಶಾಲಾ ಬಸ್ಗಳನ್ನು ಗುರಿಯಾಗಿಸಿಕೊಂಡು ವಿಶೇಷ ತಪಾಸಣೆ ನಡೆಸಿದ ಅಧಿಕಾರಿಗಳು, ನಿಯಮ ಉಲ್ಲಂಘಿಸಿರುವ 10ಕ್ಕೂ ಹೆಚ್ಚು ಬಸ್ಗಳನ್ನು ಜಪ್ತಿ ಮಾಡಿದ್ದಾರೆ.
ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಖಾಸಗಿ ಶಾಲಾ ವಾಹನಗಳ ಮೇಲೆ ಆರ್ಟಿಒ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ.
ಶಾಲಾ ಬಸ್ಗಳ ದಾಖಲೆಗಳು, ವಾಹನಗಳ ಸ್ಥಿತಿ ಹಾಗೂ ಸಾರಿಗೆ ನಿಯಮಗಳ ಪಾಲನೆ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ನಿಯಮಗಳನ್ನು ಗಾಳಿಗೆ ತೂರಿ ವಾಹನಗಳನ್ನು ರಸ್ತೆಗಿಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.***********************************






