ಪ್ರಕೃತಿ ಬೆಳಗಾವಿ

*ಬೌ ಬೌ ದಾಳಿಗೆ ಬೆಚ್ಚಿ ಬಿದ್ದ ಜನ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಸಮಸ್ಯೆ ಉಲ್ಬಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದೆ. ಪಟ್ಟಣದ ಬಹುತೇಕ ಬಡಾವಣೆಗಳಲ್ಲಿ 50 ಕ್ಕೂ ಹೆಚ್ಚು ಬೀದಿ ನಾಯಿಗಳು ಗುಂಪು ಗುಂಪಾಗಿ ಓಡಾಡುತ್ತಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಶಾಲೆಗೆ ತೆರಳುವ ಮಕ್ಕಳು ಹಾಗೂ ಶಾಲೆಯಿಂದ ಮನೆಗೆ ವಾಪಸ್ ಬರುವ ಮಕ್ಕಳಿಗೆ ಬೀದಿ ನಾಯಿಗಳಿಂದ ಆತಂಕ ಎದುರಾಗಿದೆ.

ಸಮಾಜ ಸೇವಕ, ಚಂದಕಾಂತ ಹುಕ್ಕೇರಿ ಮಾತನಾಡಿ, ವೃದ್ಧರು ಹಾಗೂ ಮಹಿಳೆಯರು ಪ್ರತಿದಿನ ಒಂದು ಬಡಾವಣೆಯಿಂದ ಮತ್ತೊಂದು ಬಡಾವಣೆಗೆ ಓಡಾಡುವ ಸಂದರ್ಭದಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಭಯದ ವಾತಾವರಣ ನಿರ್ಮಾಣವಾಗಿದೆ,ಯಾವಾಗ ಯಾರ ಮೇಲೆ ನಾಯಿಗಳು ದಾಳಿ ಮಾಡುತ್ತವೆ ಎಂಬ ಆತಂಕದಲ್ಲಿ ಜನರು ಓಡಾಡುವಂತಾಗಿದೆ, ಬೀದಿ ನಾಯಿಗಳ ನಿಯಂತ್ರಣಕ್ಕೆ ಚಿಕ್ಕೋಡಿ ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳಬೇಕು.

ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಬೀದಿ ನಾಯಿಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸಾರ್ವಜನಿಕರು ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಜನರ ಸುರಕ್ಷತೆಗಾಗಿ ಪುರಸಭೆ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.******************************

Leave a Reply

Your email address will not be published. Required fields are marked *

Back to top button