ಪ್ರಕೃತಿ ಬೆಳಗಾವಿ

*ಹೆರಾಯಿನ್ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಹೆರಾಯಿನ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ, 3 ಲಕ್ಷ ರು. ಮೌಲ್ಯದ ಮಾದಕ ವಸ್ತು ಹಾಗೂ ಎರಡು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಕಳೆದ ಅ.17ರಂದು ನಗರದ ರಾಷ್ಟ್ರೀಯ ಹೆದ್ದಾರಿ ಸಮೀಪದ ಜೈ ಕಿಸಾನ್ ಬಾಜಿ ಮಾರ್ಕೆಟ್ ಗೇಟ್ ನಂ.1ರ ಬಳಿ ದಾಳಿ ನಡೆಸಿದ ಪೊಲೀಸರು, ಮಹಾಂತೇಶ ಅಂಬಿಗೇರ (37) ಹಾಗೂ ಆಕಾಶ ನಂದಿ (28) ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 124 ಸಣ್ಣ ಚೀಟಿಗಳಲ್ಲಿ ಪ್ಯಾಕ್ ಮಾಡಿದ್ದ 14.49 ಗ್ರಾಂ ಹೆರಾಯಿನ್ ಪೌಡರ್ ವಶಪಡಿಸಿಕೊಳ್ಳಲಾಗಿದೆ.

ಮಹಾರಾಷ್ಟ್ರದ ‘ಅಮ್ಮ’ ಎಂಬಾಕೆಯಿಂದ ಹೆರಾಯಿನ್ ತಂದಿರುವುದಾಗಿ ಆರೋಪಿಗಳು ತಿಳಿಸಿದ್ದು, ಆಕೆಯ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.*********************************

Leave a Reply

Your email address will not be published. Required fields are marked *

Back to top button