ಪ್ರಕೃತಿ ಬೆಳಗಾವಿ

*ಗೃಹ ಕಚೇರಿಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಆಯುಧ ಪೂಜೆ*

*ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆಯ ಹಾರ್ದಿಕ ಶುಭಾಶಯ ಕೋರಿದ ಮಾಜಿ ಸಚಿವೆ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ತಮ್ಮ ಗೃಹ ಕಚೇರಿಯಲ್ಲಿ ಆಯುಧ ಪೂಜೆ ನೆರವೇರಿಸಿ, ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆಯ ಹಾರ್ದಿಕ ಶುಭಾಶಯಗಳನ್ನು ಕೋರಿದರು.

ಹಿಂದೂ ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ಆಯುಧಗಳಿಗೆ ದೈವಸ್ವರೂಪದ ಸ್ಥಾನ ನೀಡಲಾಗಿದ್ದು, ಅವುಗಳನ್ನು ಪೂಜಿಸುವುದು ವಿಶೇಷ ಮಹತ್ವ ಹೊಂದಿದೆ. ಈ ಪವಿತ್ರ ಸಂದರ್ಭದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ದಿವ್ಯ ಕೃಪೆ ಎಲ್ಲರ ಮೇಲಿರಲಿ ಎಂದು ಪ್ರಾರ್ಥಿಸಿದ ಲಕ್ಷ್ಮೀ ಹೆಬ್ಬಾಳಕರ್, ನಾಡಿನ ಜನತೆಗೆ ಆಯಸ್ಸು, ಆರೋಗ್ಯ, ಶಾಂತಿ ಹಾಗೂ ಸಮೃದ್ಧಿ ಲಭಿಸಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಉಪಸ್ಥಿತರಿದ್ದರು.******************************

Leave a Reply

Your email address will not be published. Required fields are marked *

Back to top button