ಪ್ರಕೃತಿ ಬೆಳಗಾವಿ

*ಮಟಕಾ ಅಡ್ಡೆ ಮೇಲೆ ಪೊಲೀಸರ ದಾಳಿ; ಓರ್ವನ ಬಂಧನ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಹಿರೇಬಾಗೇವಾಡಿ ಗ್ರಾಮದ ಎಪಿಎಂಸಿ ಮಾರುಕಟ್ಟೆ ಪ್ರದೇಶದಲ್ಲಿ ಅಕ್ರಮವಾಗಿ ಮಟಕಾ ಜೂಜಾಟ ನಡೆಸುತ್ತಿದ್ದ ಅಡ್ಡೆ ಮೇಲೆ ಹಿರೇಬಾಗೇವಾಡಿ ಠಾಣೆ ಪೊಲೀಸರು ದಾಳಿ ನಡೆಸಿ ಶಕೀಲಅಹ್ಮದ ಮೊಹಮ್ಮದಗೌಸ್ ಬಾಗವಾನ್ (65) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಅಕ್ಟೋಬರ್ 29ರಂದು ಪಿಎಸ್‌ಐ ಅವಿನಾಶ ಎ.ವೈ. ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ 1,250 ರು.ನಗದು ಹಾಗೂ ಓಸಿ ಚೀಟಿಗಳನ್ನು ಜಪ್ತಿ ಮಾಡಲಾಗಿದೆ. ಈ ಕುರಿತು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.********************************

Leave a Reply

Your email address will not be published. Required fields are marked *

Back to top button