ಪ್ರಕೃತಿ ಬೆಳಗಾವಿ
*ಅಕ್ರಮ ಮದ್ಯ ಮಾರಾಟ: ಆರೋಪಿ ಬಂಧನ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಹಿರೇಬಾಗೇವಾಡಿ, ಆರ್‌ಸಿಯು ರಸ್ತೆ ಎಪಿಎಂಸಿ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಿ, ಸೇವನೆಗೆ ಅವಕಾಶ ಕಲ್ಪಿಸುತ್ತಿದ್ದ ತಾರಿಹಾಳದ ಶಿವಾಜಿ ಗೌಂಡಾಡರ (59) ಎಂಬಾತನ ಮೇಲೆ ಹಿರೇಬಾಗೇವಾಡಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಪಿಎಸ್‌ಐ ಬಸವರಾಜ ಮಿಟಗಾರ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.**************************






