ಪ್ರಕೃತಿ ಬೆಳಗಾವಿ
*ಬೆಳಗಾವಿ ರೈತರ ಜೈಲ್ ಭರೋ ಚಳವಳಿ ಆರಂಭ ಹೋರಾಟದಲ್ಲಿ ಸಾವಿರಾರು ರೈತರ ಭಾಗಿ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ಕಬ್ಬಿನ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ.
ರೈತ ಮುಖಂಡ ಚುನ್ನಪ್ಪ ಪೂಜಾರಿ ಅವರ ನೇತೃತ್ವದಲ್ಲಿ ಇಂದು (ನವೆಂಬರ್ 2) ಜೈಲ್ ಭರೋ ಚಳವಳಿ ಆರಂಭಗೊಂಡಿದೆ. ಗುರ್ಲಾಪುರದಿಂದ ಹಿಂಡಲಗಾ ಕೇಂದ್ರ ಕಾರಾಗೃಹದವರೆಗೆ ಹಮ್ಮಿಕೊಂಡಿರುವ ಈ ಹೋರಾಟದಲ್ಲಿ ಸಾವಿರಾರು ರೈತರು ಭಾಗವಹಿಸಿದ್ದು, ಬೃಹತ್ ಸಂಖ್ಯೆಯಲ್ಲಿ ರೈತರು ಮೆರವಣಿಗೆಯಲ್ಲಿ ಸಾಗುತ್ತಿರುವ ದೃಶ್ಯ ಕಂಡುಬಂದಿದೆ.
ಪ್ರತಿ ಟನ್ ಕಬ್ಬಿಗೆ ಕಾರ್ಖಾನೆಗಳಿಂದ ₹4,500 ಹಾಗೂ ರಾಜ್ಯ ಸರ್ಕಾರದಿಂದ ₹1,000 ನೆರವು ನೀಡಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ.
ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಸುವುದಾಗಿ ರೈತ ಮುಖಂಡರು ತಿಳಿಸಿದ್ದಾರೆ.*********************************






