ಪ್ರಕೃತಿ ಬೆಳಗಾವಿ

*ಬೆಳಗಾವಿ ಅಧಿವೇಶನಕ್ಕೆ 7 ಸಾವಿರ ಪೊಲೀಸರ ಭದ್ರತೆ; 600 ಸಿಸಿಟಿವಿ, 10 ಡ್ರೋನ್ ಕಣ್ಗಾವಲು*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ನಗರದ ಸುವರ್ಣಸೌಧದಲ್ಲಿ ಡಿಸೆಂಬರ್ 2ರಿಂದ 11ರವರೆಗೆ ನಡೆಯಲಿರುವ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದೆ.

ಅಧಿವೇಶನದ ಬಂದೋಬಸ್ತ್‌ಗಾಗಿ ಹೊರ ಜಿಲ್ಲೆಗಳಿಂದ 7 ಸಾವಿರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ, 500 ಗೃಹರಕ್ಷಕ ಸಿಬ್ಬಂದಿ ಹಾಗೂ 35 ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲು ಕೇಂದ್ರ ಕಚೇರಿಗೆ ಮನವಿ ಸಲ್ಲಿಸಲಾಗಿದೆ.

ಅಲ್ಲದೆ, ಎಎಸ್‌ಪಿ, ಡಿಎಸ್‌ಪಿ, ಇನ್ಸ್‌ಪೆಕ್ಟರ್ ಸೇರಿದಂತೆ ವಿವಿಧ ಹಂತದ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ.

ನಗರದ ಸೂಕ್ಷ್ಮ ಪ್ರದೇಶಗಳಲ್ಲಿ 600 ಹೆಚ್ಚುವರಿ ಸಿಸಿಟಿವಿ ಕ್ಯಾಮರಾಗಳು ಹಾಗೂ ಪ್ರತಿಭಟನೆ ಮತ್ತು ಸಂಚಾರ ವ್ಯವಸ್ಥೆಯ ಮೇಲೆ ನಿಗಾ ಇಡಲು 10 ಡ್ರೋನ್‌ಗಳನ್ನು ಬಳಸಲಾಗುತ್ತದೆ. ಪ್ರತಿಭಟನಾ ಸ್ಥಳಗಳಲ್ಲಿ 2 ಸಾವಿರ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗುತ್ತಿದ್ದು, ಅಗ್ನಿಶಾಮಕ ವಾಹನ ಮತ್ತು ಆಂಬ್ಯುಲೆನ್ಸ್‌ಗಳನ್ನು 24 ಗಂಟೆಗಳ ಕಾಲ ಸನ್ನದ್ಧವಾಗಿಡಲಾಗುತ್ತದೆ.***************************

Leave a Reply

Your email address will not be published. Required fields are marked *

Back to top button