ಪ್ರಕೃತಿ ಬೆಳಗಾವಿ

*ಮಾಲದಿನ್ನಿ ಕ್ರಾಸ್ ಬಳಿ ಲಾರಿ–ಕಾರಿನ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣ, ನಾಲ್ವರಿಗೆ ಗಂಭೀರ ಗಾಯ!

*ಗೋಕಾಕ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರ!

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮಾಲದಿನ್ನಿ ಕ್ರಾಸ್ ಬಳಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಮತ್ತು ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪುಣೆಯಿಂದ ಸವದತ್ತಿಗೆ ತೆರಳುತ್ತಿದ್ದ ಕಾರು ಹಾಗೂ ಯರಗಟ್ಟಿಯಿಂದ ಗೋಕಾಕ್ ಕಡೆಗೆ ಬರುತ್ತಿದ್ದ ಲಾರಿ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರು ಪುಣೆ ಮೂಲದ ಮಾಂಡ್ರೆ ಕುಟುಂಬದವರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಆದರೆ ಮೃತರು ಹಾಗೂ ಗಾಯಗೊಂಡವರ ಸಂಪೂರ್ಣ ಹೆಸರು ಮತ್ತು ಇತರ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.

ಘಟನಾ ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.********************************

Leave a Reply

Your email address will not be published. Required fields are marked *

Back to top button