ಪ್ರಕೃತಿ ಬೆಳಗಾವಿ

*ಚಳಿಗಾಲ ಅಧಿವೇಶನ: ಆತ್ಮಹತ್ಯೆ ನಿಗ್ರಹ ದಳಕ್ಕೆ ವಿಶೇಷ ತರಬೇತಿ*

ಪ್ರಕೃತಿ ಬೆಳಗಾವಿ ಸುದ್ದಿ : ಬೆಳಗಾವಿ : ನಗರದ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 2ರಿಂದ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ಆತ್ಮಹತ್ಯೆ ನಿಗ್ರಹ ದಳವನ್ನು ರಚಿಸಿದ್ದು, ತಂಡದ ಸಿಬ್ಬಂದಿಗೆ ಬುಧವಾರ ವಿಶೇಷ ತರಬೇತಿ ನೀಡಲಾಯಿತು.

ಅಧಿವೇಶನದ ಸಂದರ್ಭದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ರೈತಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳು ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ. ಈ ವೇಳೆ ಪ್ರತಿಭಟನಾಕಾರರು ಆತ್ಮಹತ್ಯೆಗೆ ಯತ್ನಿಸುವಂತಹ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸ್ ಆಯುಕ್ತರ ನಿರ್ದೇಶನದಂತೆ ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡ ರಚಿಸಲಾಗಿದೆ.

ನ.18ರಂದು ಬಿಮ್ಸ್ ಆಸ್ಪತ್ರೆಯ ಸಭಾಂಗಣದಲ್ಲಿ ಡಿಸಿಪಿ ಅಧ್ಯಕ್ಷತೆಯಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು. ಬಿಮ್ಸ್ ಆಸ್ಪತ್ರೆಯ ನುರಿತ ವೈದ್ಯಾಧಿಕಾರಿಗಳು ಆತ್ಮಹತ್ಯೆ ತಡೆಗಟ್ಟುವ ವಿಧಾನಗಳು ಹಾಗೂ ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ರಕ್ಷಣಾ ಕ್ರಮಗಳ ಕುರಿತು ಸಿಬ್ಬಂದಿಗೆ ತರಬೇತಿ ನೀಡಿದರು.

ಆತ್ಮಹತ್ಯೆ ನಿಗ್ರಹ ದಳದ ಉಸ್ತುವಾರಿ ಅಧಿಕಾರಿ, ಸಿಸಿಬಿ ವಿಭಾಗದ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ ನಾಯಿಕ ಹಾಗೂ ತಂಡದ ಸಿಬ್ಬಂದಿ ತರಬೇತಿಯಲ್ಲಿ ಪಾಲ್ಗೊಂಡಿದ್ದರು.******************************

Leave a Reply

Your email address will not be published. Required fields are marked *

Back to top button